ಶಿವಮೊಗ್ಗದಲ್ಲಿ ಬೀದಿಗಿಳಿದ ವಸತಿ ಶಾಲೆ ಸಿಬ್ಬಂದಿ, ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ (Protest) ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬೋಧಕ, ಬೋಧಕೇತರ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪೈಲೆಟ್‌ ತರಬೇತಿ ಸಂಸ್ಥೆ, ಕನ್ನಡಿಗರಿಗೆ ಶೇ.25ರಷ್ಟು ಸೀಟ್‌, ಶುಲ್ಕ ವಿನಾಯಿತಿ

ನೆಹರು ಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ವಸತಿ ಶಿಕ್ಷಣ ನಿರ್ದೇಶನಾಲಯ ರಚಿಸಬೇಕು. ಇಲ್ಲವೆ ಎಸ್‌.ಸಿ, ಎಸ್‌.ಟಿ, ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು ಎಂದು ಆಗ್ರಹಿಸಿದರು.

ಕಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು. ಕಾಯಂ ನೌಕರರಿ ಶೇ.10ರಷ್ಟು ವಿಶೇಷ ಭತ್ಯೆ ಮಂಜೂರು ಮಾಡಿಸಬೇಕು ಎಂದು ಆಗ್ರಹಿಸಿದರು.  ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Protest-by-residential-school-staff-in-Shimoga-

Protest-by-residential-school-staff-in-Shimoga-

Protest-by-residential-school-staff-in-Shimoga-

Protest-by-residential-school-staff-in-Shimoga-

Protest-by-residential-school-staff-in-Shimoga-

ಇದನ್ನೂ ಓದಿ » ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ, ಫೋಟೊಗ್ರಾಫರ್‌ ಕೊನೆಯುಸಿರು

Protest-by-residential-school-staff-in-Shimoga-

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment