ಶಿವಮೊಗ್ಗ: ತೀವ್ರ ಕೆಮ್ಮಿನಿಂದ ಬಳಲುತ್ತಿದ್ದ ವಸತಿ ಶಾಲೆಯ (Residential School) 17 ವಿದ್ಯಾರ್ಥಿನಿಯರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಲು, ಚಿಕಿತ್ಸೆ ಕುರಿತು ಮಾಹಿತಿ ಪಡೆಯಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಕರ್ಷಕ ಪಥಸಂಚಲನ, ಹೇಗಿತ್ತು? ಯಾವೆಲ್ಲ ತುಕಡಿ ಪಾಲ್ಗೊಂಡಿದ್ದವು?
ರಾಗಿಗುಡ್ಡದಲ್ಲಿರುವ ಡಾ. ಅಂಬೇಡ್ಕರ್ ವಿದ್ಯಾರ್ಥಿನಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರಲ್ಲಿ ಕೆಮ್ಮು ಕಾಣಿಸಿಕೊಂಡಿದೆ. ಶಾಲೆ ಸಿಬ್ಬಂದಿ ಕೂಡಲೆ ವಿದ್ಯಾರ್ಥಿನಿಯರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಮೆಗ್ಗಾನ್ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ 17 ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಡಿಸಿ, ಸಿಇಒ ಭೇಟಿ, ಮಾಹಿತಿ ಸಂಗ್ರಹ
ಇನ್ನು, ವಿಷಯ ತಿಳಿದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ವಿದ್ಯಾರ್ಥಿನಿಯರ ಆರೋಗ್ಯ ವಿಚಾರಸಿದರು. ಬಳಿಕ ಆಸ್ಪತ್ರೆಯ ವೈದ್ಯರು, ಶಾಲೆ ಶಿಕ್ಷಕರ ಜೊತೆಗೆ ಕಿರು ಸಭೆ ನಡೆಸಿದರು.

ಸಿಇಓ ಏನಂದ್ರು? ಘಟನೆ ಕುರಿತು ಶಿವಮೊಗ್ಗ ಲೈವ್.ಕಾಂಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್, “ಕೆಲವು ಮಕ್ಕಳಲ್ಲಿ ಕೆಮ್ಮಿನ ಲಕ್ಷಣ ಕಂಡು ಬಂದಿದೆ. ಈ ಹಿನ್ನೆಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದಿದ್ದೇವೆ. ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ರಕ್ತದ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಚಿಕಿತ್ಸೆ ನಡೆಯಲಿದೆ. ಸದ್ಯ 17 ವಿದ್ಯಾರ್ಥಿನಿಯರು ಆರೋಗ್ಯವಾಗಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.



LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು





