ಶಿವಮೊಗ್ಗದಲ್ಲಿ ರಾತ್ರಿ ಖಾಲಿ ಬಿಂದಿಗೆ, ಬಕೆಟ್‌ ಹಿಡಿದು ಬೀದಿಗಿಳಿದ ಮಹಿಳೆಯರು, ಮಕ್ಕಳು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಕಳೆದ ಒಂದು ವಾರದಿಂದ ಸಮರ್ಪಕವಾಗಿ ಕುಡಿಯುವ ನೀರು (Water) ಪೂರೈಕೆ ಮಾಡದ ಅಧಿಕಾರಿಗಳ ವಿರುದ್ಧ ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಲಿ ಬಿಂದಿಗೆ, ಬಕೇಟ್‌ ಹಿಡಿದು ಪ್ರತಿಭಟನೆ ನಡೆಸಿದರು.
➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್‌

ಸೋಮಿನಕೊಪ್ಪ ಸಮೀಪದ ಸಹ್ಯಾದ್ರಿ ನಗರದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ನಾಗರಿಕರು ಪ್ರತಿಭಟನೆ ನಡೆಸಿದರು.

Sahyadri Layout residents protest for water

ಹಳೆ ಪದ್ಧತಿಯ ಬದಲು 24×7 ಯೋಜನೆ ಅಡಿ ನೀರು (Water) ಪೂರೈಕೆ ವ್ಯವಸ್ಥೆ ಮಾಡಿದ್ದಾರೆ. ಈ ಬದಲಾವಣೆ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿಲ್ಲ. ಈಗ ಹಳೆ ಪದ್ಧತಿಯಲ್ಲು ನೀರು ಬಿಡುತ್ತಿಲ್ಲ. ಹೊಸ ಪದ್ಧತಿಯಲ್ಲು ನೀರು ಪೂರೈಕೆ ಆಗುತ್ತಿಲ್ಲ. ಹಾಗಾಗಿ ಕಳೆದ ಒಂದು ವಾರದಿಂದ ಇಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ಕರೆ ಮಾಡಿದರು ಸಂಪರ್ಕಕ್ಕೆ ಸಿಗುತ್ತಿಲ್ಲ. ಸೂಕ್ತ ಪ್ರತಿಕ್ರಿಯೆ ಲಭಿಸುತ್ತಿಲ್ಲ.

– ಸ್ಥಳೀಯರ ಆರೋಪ

Sahyadri-Nagara-residents-protest-for-drinking-water.

ಸೂಕ್ತ ಮಾಹಿತಿ ನೀಡದೆ ಕುಡಿಯುವ ನೀರು ಪೂರೈಕೆ ಸ್ಥಗಿತಗೊಳಿಸಿದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ನೀರು ಪೂರೈಕೆ ಮಾಡಬೇಕು. ಇಲ್ಲವಾದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ಕುಲುಷಿತ, ದುರ್ವಾಸನೆಯ ನೀರು ಪೂರೈಕೆ

water1

ಇನ್ನೊಂದೆಡೆ ವಿನೋಬನಗರ ಸಮೀಪದ ಕೆಂಚಪ್ಪ ಬಡಾವಣೆಗೆ ಇಂದು ಕಲುಷಿತ ನೀರು ಪೂರೈಕೆಯಾಗಿದೆ ಎಂದು ಸ್ಥಳೀಯರು ಆಪಾದಿಸಿದ್ದಾರೆ. ನೀರು ದುರ್ವಾಸನೆ ಬರುತ್ತಿದ್ದು ಬಳಕೆಗೆ ಯೋಗ್ಯವಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment