| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 20 JANUARY 2023
SHIMOGA : ಮತದಾನ ಕೇಂದ್ರ ಬದಲಾವಣೆ (voting booth) ಮಾಡದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಸ್ವಾಮಿ ವಿವೇಕಾನಂದ ಬಡಾವಣೆಯ ಸೌಹಾರ್ದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ ನೀಡಿದೆ.
![]()
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸ್ಥಳೀಯರು, ಸ್ವಾಮಿ ವಿವೇಕಾನಂದ ಬಡಾವಣೆಯ ಇ, ಸಿ, ಡಿ, ಬ್ಲಾಕ್ ಗಳ ವ್ಯಾಪ್ತಿ ವಾಸ್ತವವಾಗಿ ಮಹಾನಗರ ಪಾಲಿಕೆಯ 17ನೇ ವಾರ್ಡ್ಗೆ ಸೇರುತ್ತದೆ. ಆದರೆ ಈ ವಾರ್ಡ್ನ ಮತದಾರರನ್ನು 6ನೇ ವಾರ್ಡ್ ಗಾಡಿಕೊಪ್ಪಕ್ಕೆ ಸೇರಿಸಲಾಗಿದೆ. ನಮ್ಮ ವಾರ್ಡ್ನ ಮತದಾರರನ್ನು ಗಾಡಿಕೊಪ್ಪ ವಾರ್ಡ್ಗೆ ಸೇರಿಸಿರುವುದರಿಂದ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಮತದಾನ ಮಾಡಲು ಕಷ್ಟವಾಗುತ್ತದೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ನಮ್ಮ ವಾರ್ಡ್ನಿಂದ ದೂರದ 6ನೇ ವಾರ್ಡ್ಗೆ ಹೋಗುವುದನ್ನು ತಪ್ಪಿಸಿ. ಎಲ್ಲಾ ಮತಗಳನ್ನು 17ನೇ ವಾರ್ಡ್ಗೆ ಸೇರಿಸಬೇಕು. ಪಕ್ಕದಲ್ಲೇ ಇರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೂತನ ಬೂತ್ (voting booth) ಸ್ಥಾಪಿಸಬೇಕು. ಈ ಮೂಲಕ ಮತದಾರರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ದಿನಾಂಕ ಫಿಕ್ಸ್, ಕಾರಣವೇನು?
ಸಂಘದ ಅಧ್ಯಕ್ಷ ಎಸ್.ಬಿ. ರಾಮಪ್ಪ ಗೌಡ, ಹೆಚ್.ಪಿ. ರಮೇಶ್, ಸಮಿತಿ ಸದಸ್ಯರಾದ ವಿ.ಟಿ.ಅರುಣ್, ಎಸ್.ಜಿ. ನಾಯಕ್, ಕೃಷ್ಣಮೂರ್ತಿ, ಕಿರಣ್ ಇದ್ದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()