ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?

ಶಿವಮೊಗ್ಗ: ಕಂದಾಯ ಇಲಾಖಾ (Revenue Department) ನೌಕರರು, ಅವರ ಕುಟುಂಬದ ಸದಸ್ಯರಿಗಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಮ್ಮೇಳನವನ್ನು ಡಿ.12 ಮತ್ತು 13ರಂದು ಆಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ನೌಕರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.

ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, ರಾಜ್ಯದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಯಾವಾಗ?

ಡಿ. 12ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಅಭಿಷೇಕ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ–ಸ್ವಾಧೀನಾಧಿಕಾರಿ ಸಿದ್ದಲಿಂಗರೆಡ್ಡಿ, ಪ್ರೊಬೇಷನರ್ ಅಧಿಕಾರಿ ನಾಗೇಂದ್ರಬಾಬು ಕುಮಾರ್ ಉಪಸ್ಥಿತರಿರುವರು. ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಎಚ್. ಸತ್ಯನಾರಾಯಣ, ಸಾಗರ ಉಪವಿಭಾಗಾಧಿಕಾರಿ ವೀರೇಶ ಕುಮಾರ್, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‌ರು ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಹೇಳಿದರು.

Kandayotsva-in-Shivamogga

ಇದನ್ನೂ ಓದಿ » ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್‌ ಏನು?

ಡಿ. 13ರಂದು ಸಂಜೆ 6 ಗಂಟೆಗೆ ನಗರದ ಬಸವನಗುಡಿಯಲ್ಲಿರುವ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಕಂದಾಯೋತ್ಸವದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ ಉದ್ಘಾಟಿಸುವರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸುವರು ಎಂದರು.

Kandayotsva-in-Shivamogga

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment