ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019
ಹೊಸನಗರ ತಾಲ್ಲೂಕು ಆಹಾರ ನಿರೀಕ್ಷಕ ಐ.ಡಿ. ದತ್ತಾತ್ರಯ ಅವರ ಆತ್ಮಹತ್ಯೆಗೆ ಅಧಿಕಾರಿಗಳೇ ಕಾರಣ, ಅವರ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಶಾಖೆಯ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಆಹಾರ ನಿರೀಕ್ಷಕ ದತ್ತಾತ್ರೇಯ ಅವರ ಆತ್ಮಹತ್ಯೆಗೆ ಹೊಸನಗರ ತಾಲ್ಲೂಕಿನ ತಹಶೀಲ್ದಾರ್ ಶ್ರೀಧರ ಮೂರ್ತಿ, ಉಪ ತಹಶೀಲ್ದಾರ್ ಜಯಪ್ಪಾಚಾರಿ ಸೇರಿದಂತೆ ಸುಮಾರು 9 ಅಧಿಕಾರಿಗಳು ಕಾರಣರಾಗಿದ್ದಾರೆ. ತಮ್ಮ ಸಾವಿಗೆ ಇವರೇ ಕಾರಣ ಎಂದು ಡೆತ್ನೋಟ್ ಸಹ ಅವರು ಬರೆದಿದ್ದಾರೆ. ಈಗಾಗಲೇ 9 ಜನರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ ಆತ್ಮಹತ್ಯೆಗೆ ಕಾರಣರಾದ ಈ ಎಲ್ಲರನ್ನು ಕೆಲಸದಿಂದ ಅಮಾನತುಗೊಳಿಸಿ ಕೂಡಲೇ ಬಂಧಿಸುವಂತೆ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.
ದತ್ತಾತ್ರೇಯ ಅವರಿಗೆ ಕಚೇರಿಯಲ್ಲಿ ಬಹಳ ಕಿರುಕುಳ ನೀಡುತ್ತಿದ್ದರು. ಮಗಳ ಮದುವೆಗು ರಜೆ ಕೊಟ್ಟಿರಲಿಲ್ಲ. ವಿನಾಕಾರಣ ದತ್ತಾತ್ರೇಯ ಅವರ ವಿರುದ್ಧ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದರು. ಆರೋಗ್ಯ ತಪಾಸಣೆಗೂ ರಜೆ ನೀಡಿರಲಿಲ್ಲ ಎಂದು ಕುಟುಂಬದವರು ದೂರು ನೀಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಹಾಗಾಗಿ ಎಫ್ಐಆರ್’ನಲ್ಲಿ ಹೆಸರಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕೆ.ಆರುಣ್ ಕುಮಾರ್, ಗ್ರಾಮ ಲೆಕ್ಕಿಗರ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ನಾಯ್ಕ, ಪ್ರಮುಖರಾದ ಕೃಷ್ಣಪ್ಪ, ಹೆಚ್.ಪಿ.ಗಣೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Revenue Department Employees protest against the officers who harassed a Food Department Official and made him to commit suicide.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422