SHIMOGA, 31 JULY 2024 : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದ ಪಕ್ಕದಲ್ಲಿ ತುಂಗಾನದಿಯ (RIVER) ಹೊರಹರಿವು ಹೆಚ್ಚಾಗಿದೆ. ನೀರಿನ ಮಟ್ಟ 27 ಅಡಿಗಳಷ್ಟು ಇದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ನದಿಗೆ ಅಳವಡಿಸಿರುವ ಮೋಟಾರ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಆದ್ದರಿಂದ ಶಿವಮೊಗ್ಗ ನಗರದಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ ⇓
ಚಕ್ರಾದಲ್ಲಿ ಒಂದೇ ದಿನ 200 ಮಿ.ಮೀ ಮಳೆ, ಹೊಸನಗರದಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200