ಶಿವಮೊಗ್ಗದ ಹೊಳೆ ಬಸ್‌ ಸ್ಟಾಪ್‌ ಬಳಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 APRIL 2023

SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ರಸ್ತೆ ತಡೆ (Road Block) ಮಾಡಿದರು. ಹೊಳೆ ಬಸ್‌ ನಿಲ್ದಾಣದಲ್ಲಿ ರಸ್ತೆ ತಡೆ ಮಾಡಿದ ಅಭಿಮಾನಿಗಳು, ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

Eshwarappa-Fans-block-road-in-BH-Road-hole-bus-stop

ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಅಭಿಮಾನಿಗಳು, ಬಳಿಕ ಬಿ.ಹೆಚ್‌.ರಸ್ತೆಗೆ ಬಂದು ಆಕ್ರೋಶ ಹೊರ ಹಾಕಿದರು. ಟೈರ್‌ಗೆ ಬೆಂಕಿ ಹಚ್ಚಿ ಸಿಟ್ಟು ತೋರಿಸಿದರು.

ಇದನ್ನೂ ಓದಿ – ಈಶ್ವರಪ್ಪ ನಿವೃತ್ತಿ ವಿಚಾರ, ಸಂಸದ ಬಿ.ವೈ.ರಾಘವೇಂದ್ರ ಮೊದಲ ಪ್ರತಿಕ್ರಿಯೆ

ಈಶ್ವರಪ್ಪ ಅವರು ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಬೇಕು. ಹೈಕಮಾಂಡ್‌ ಈಶ್ವರಪ್ಪ ಅವರು ಅಥವಾ ಕಾಂತೇಶ್‌ ಅವರಿಗೆ ಟಿಕೆಟ್‌ ಘೋಷಿಸಬೇಕು ಎಂದು ಒತ್ತಾಯಿಸಿದರು. ದಿಢೀರ್‌ ಪ್ರತಿಭಟನೆಯಿಂದಾಗಿ ಬಿ.ಹೆಚ್‌.ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment