ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಡಿಸೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶಿವಮೊಗ್ಗದಲ್ಲಿ ದಿಢೀರ್ ರಸ್ತೆ ನಡೆಸಿದರು. ಇದರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸವಳಂಗ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು.
ವಿದ್ಯಾರ್ಥಿಗಳ ಬೇಡಿಕೆ ಏನು?
ಬೇಡಿಕೆ 1 – ಎಸ್.ಎಸ್.ಪಿ ಅಡಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಘೋಷಣೆ ಮಾಡಿತ್ತು. ಈ ವರ್ಷ ಪೂರ್ಣಗೊಂಡರೂ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ತಲುಪಿಲ್ಲ. ಕೂಡಲೆ ಸರ್ಕಾರ ಸ್ಕಾಲರ್ ಶಿಪ್ ಬಿಡುಗಡೆ ಮಾಡಬೇಕು.
ಬೇಡಿಕೆ 2 – ನಗರದ ಹೊರವಲಯದಲ್ಲಿ ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ಶಾಲೆ, ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಕೂಡಲೆ ಬಸ್ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ದಿಢೀರ್ ರಸ್ತೆ ತಡೆ
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು, ಜಿಲ್ಲಾಧಿಕಾರಿ ಅವರು ತಮ್ಮ ಬೇಡಿಕೆ ಆಲಿಸಲು ಬರಬೇಕು ಎಂದು ಆಗ್ರಹಿಸಿದರು. ಆದರೆ ಜಿಲ್ಲಾಧಿಕಾರಿ ಅವರು ಬಾರದ ಹಿನ್ನೆಲೆ ವಿದ್ಯಾರ್ಥಿಗಳು ಡಿಸಿ ಕಚೇರಿ ಮುಂಭಾಗದ ರಸ್ತೆಗೆ ಬಂದು ಕುಳಿತಿರು. ದಿಢೀರ್ ರಸ್ತೆ ತಡೆ ನಡೆಸಿದರು.
ಪೊಲೀಸರ ಜೊತೆ ಮಾತಿನ ಚಕಮಕಿ
ರಸ್ತೆ ತಡೆ ನಡೆಸದಂತೆ ಪೊಲೀಸರು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಆದರೂ ಪಟ್ಟು ಬಿಡದ ವಿದ್ಯಾರ್ಥಿಗಳು ಸವಳಂಗ ರಸ್ತೆಯಲ್ಲಿ ಕುಳಿತು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಎಡಿಸಿ ಭೇಟಿ
ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರ ತಿಳಿದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಆಲಿಸಿದರು. ಅಲ್ಲದೆ ಬೇಡಿಕೆ ಈಡೇರಿಸುವತ್ತ ಗಮನ ಹರಿಸುವುದಾಗಿ ಭರವಸೆ ನೀಡಿದರು. ಆ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
ರಸ್ತೆ ತಡೆಯಿಂದ ಟ್ರಾಫಿಕ್ ಜಾಮ್
ದಿಢೀರ್ ರಸ್ತೆ ತಡೆಯಿಂದಾಗಿ ಡಿಸಿ ಕಚೇರಿ ಮುಂಭಾಗ ಸಂಚಾರ ದಟ್ಟಣೆ ಉಂಟಾಯಿತು. ಒಂದೇ ಬದಿಯಲ್ಲಿ ಎರಡು ಕಡೆ ವಾಹನಗಳು ಸಂಚಾರಕ್ಕೆ ಪೊಲೀಸರು ವ್ಯವಸ್ಥೆ ಮಾಡಿದರು. ಇದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಬಸ್ಸುಗಳು ಮಾರ್ಗ ಬದಲಾವಣೆ ಮಾಡಿದ್ದರಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸಿದರು.