ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 18 FEBRURARY 2023

SHIMOGA : ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಜಾತ್ರೆ ನಡೆಯುತ್ತಿದೆ. ಈ ಹಿನ್ನೆಲೆ ಫೆ.18ರ ಬೆಳಗಿನ ಜವಾದಿಂದ ಫೆ.19ರ ಬೆಳಗಿನ ಜವಾದವರೆಗೆ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ, ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ (Road Diversion) ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಾಹನಗಳಿಗೆ ಪರ್ಯಾಯ ಮಾರ್ಗ

ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗೇಟ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್‍ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರಬೇಕು.

ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್‍ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್‍ನಿಂದ ಗಜಾನನ ಗೇಟ್ ಮೂಲಕ ಬಂದು ಶಿವಮೊಗ್ಗ ಸೇರಬೇಕು.

ಇದನ್ನೂ ಓದಿ – ವಿಮಾನ ನಿಲ್ದಾಣದ ಹೆಸರಿನ ಬಗ್ಗೆ ಮತ್ತೆ ಶುರುವಾಯ್ತು ಚರ್ಚೆ, ಹೋರಾಟ, ಯಾರೆಲ್ಲರ ಹೆಸರು ಮುನ್ನೆಲೆಗೆ ಬಂದಿದೆ?

ಮೇಲ್ಕಂಡ ಮಾರ್ಗಗಳಲ್ಲಿ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನ ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಅವರು ತಿಳಿಸಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment