SHIVAMOGGA LIVE NEWS | 29 MAY 2024
SHIMOGA : ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜೂನ್ 4ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಹಾಗೂ ವಾಹನಗಳ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ (Diversion) ಮಾಡಿ ಜಿಲ್ಲಾಧಿಕಾರಿ ಗುರದತ್ತ ಹೆಗಡೆ ಆದೇಶಿಸಿದ್ದಾರೆ.
ಯಾವ್ಯಾವ ಮಾರ್ಗದಲ್ಲಿ ವಾಹನ ಸಂಚಾರ ಬದಲು?
ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀ. ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ಗಳು ಹಾಗೂ ಕಾರು ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು.
ಚಿತ್ರದುರ್ಗ, ಹೊಳೆಹೊನ್ನೂರು ಕಡೆಯಿಂದ ಬಂದು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ಗಳು ಬಿ.ಹೆಚ್.ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣಕ್ಕೆ ಹೋಗಬೇಕು.
ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್ಗಳನ್ನು 100 ಅಡಿರಸ್ತೆ, ವಿನೋಬನಗರ ಮಾರ್ಗವಾಗಿ ತೆರಳಬೇಕು.
ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್ಗಳು ಎ. ಎ. ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮೂಲಕ ತೆರಳಬೇಕು.
ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್. ಸರ್ಕಲ್ ಕಡೆಗೆ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲ ಸೌಕರ್ಯ ಒದಗಿಸುವ ವಾಹನಗಳ ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿದೆ.
ಎಲ್ಲೆಲ್ಲಿದೆ ಪಾರ್ಕಿಂಗ್ ವ್ಯವಸ್ಥೆ?
ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು ಮತ್ತು ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್.ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ಪಾರ್ಕಿಂಗ್ಗೆ ಅನುಮತಿಸಿದೆ.
ಸಾರ್ವಜನಿಕ ವಾಹನಗಳಿಗೆ ಪಾರ್ಕಿಂಗ್
ಎಂ.ಆರ್.ಎಸ್. ಸರ್ಕಲ್ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ವಾಹನಗಳ ಪಾರ್ಕಿಂಗ್ಗೆ ಅನುಮತಿ ನೀಡಿದೆ. ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆ ಎಂಆರ್.ಎಸ್. ನಿಂದ ಎನ್.ಆರ್.ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು. ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ವೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲಾ ವಾಹನಗಳ ಪಾರ್ಕಿಂಗ್ಗೆ ಅನುಮತಿ ನೀಡಿದೆ. ಎಂ.ಆರ್.ಎಸ್. ಸರ್ಕಲ್ನಿಂದ ಬಿ.ಹೆಚ್.ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಒಡಾಡದಂತೆ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದ ATMನಲ್ಲಿ ಹಣ ಬಿಡಿಸುತ್ತಿದ್ದಾಗ ಒಳ ನುಗ್ಗಿದ ಯುವಕ, ದುಡ್ಡಿಗಾಗಿ ವ್ಯಕ್ತಿಯ ಅಟ್ಟಾಡಿಸಿ ಅಟ್ಯಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200