ವಾಹನ ಸವಾರರೆ ಗಮನಿಸಿ, ಮಾರಿಕಾಂಬ ಜಾತ್ರೆ ಹಿನ್ನೆಲೆ ಶಿವಮೊಗ್ಗ ಸಿಟಿಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗ
LIVE

SHIVAMOGGA LIVE NEWS | 21 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೋಟೆ ಶ್ರೀ ಮಾರಕಾಂಬೆ ಜಾತ್ರೆ ಅಂಗವಾಗಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 22 ರಿಂದ ಮಾರ್ಚ್ 26ರವರೆಗೆ ಜಾತ್ರೆ ನಡೆಯಲಿದೆ.

Nanjappa Hospital Shimoga

ಯಾವ್ಯಾವ ದಿನ, ಯಾವೆಲ್ಲ ರಸ್ತೆ ಬಂದ್ ಆಗಲಿದೆ?

» ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಎಸ್.ಪಿ.ಎಂ.ರಸ್ತೆಯಲ್ಲಿ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

» ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‍ಗಳು ಎಂಆರ್‍ಎಸ್ ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು.

» ಚಿತ್ರದುರ್ಗ-ಹೊಳೆಹೊನ್ನೂರು ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‍ಗಳು ವಿದ್ಯಾನಗರ-ಎಂ.ಆರ್.ಎಸ್. ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು.

» ಹೊನ್ನಾಳಿ-ಹೊಳಲೂರು ಕಡೆಯಿಂದ ಬರುವ ಭಾರಿ ವಾಹನಗಳು, ಸರಕು ಸಾಗಣೆ ವಾಹನಗಳು ಮತ್ತು ಬಸ್‍ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್- ಕೆಇಬಿ ಸರ್ಕಲ್- ರೈಲ್ವೆ ಸ್ಟೇಷನ್-ಉಷಾ ನರ್ಸಿಂಗ್ ಹೋಂ ಸರ್ಕಲ್- 100 ಅಡಿ ರಸ್ತೆ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು.

» ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಸಂದೇಶ್ ಮೋಟಾರ್ಸ್-ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು.

» ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.

» ಹೊಳೆ ಬಸ್ ಸ್ಟಾಪ್‍ನಿಂದ – ಬೆಕ್ಕಿನ ಕಲ್ಮಠ-ರಾಮಣ್ಣ ಶ್ರೇಷ್ಠಿ ಪಾರ್ಕ್‍ವರೆಗೆ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು. 

» ಮಾರ್ಚ್ 22ರಂದು ಬೆಳಗ್ಗೆ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ಗಾಂಧಿ ಬಜಾರ್-ಶಿವಪ್ಪನಾಯಕ ಸರ್ಕಲ್‍ವರೆಗೆ ಮತ್ತು ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡಲಾಗಿದೆ.

Kote marikamba Jathre

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ | ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 15 ಪ್ರಮುಖ ವಿಚಾರ

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

JNNCE College VTU

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment