SHIVAMOGGA LIVE NEWS | 16 MARCH 2024
SHIMOGA : ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಲ್ಲೆಡೆ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ಇನ್ನು, ಮೋದಿ ಕಾರು ಸಾಗುವ ಮಾರ್ಗದುದ್ದಕ್ಕು ಗುಂಡಿಗಳನ್ನು ಬಂದ್ ಮಾಡಲಾಗುತ್ತಿದೆ.
![]() |
ರಾರಾಜಿಸುತ್ತಿವೆ ಕೇಸರಿ ಧ್ವಜ
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ (ಫ್ರೀಡಂ ಪಾರ್ಕ್) ರಸ್ತೆಯಲ್ಲಿ ಬಿಜೆಪಿ ಧ್ವಜಗಳನ್ನು ಹಾಕಲಾಗಿದೆ. ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿದೆ. ಪ್ರಧಾನಿ ಮೋದಿ ಮತ್ತು ರಾಘವೇಂದ್ರ ಭಾವಚಿತ್ರಗಳಿರುವ ಅಲಂಕೃತ ಫ್ಲೆಕ್ಸ್ಗಳನ್ನು ಹಾಕಲಾಗಿದೆ.
ಗುಂಡಿಗಳಿಗೆ ಸಿಗಲಿದೆ ಮುಕ್ತಿ
ಇನ್ನು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳನ್ನು ಬಂದ್ ಮಾಡಲಾಗುತ್ತಿದೆ. ಬಿ.ಹೆಚ್.ರಸ್ತೆಯಲ್ಲಿ ಡಾಂಬರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಕಸ, ಮಣ್ಣು ತೆರವು ಮಾಡಲಾಗುತ್ತಿದೆ. ಇದಕ್ಕಾಗಿ ಜೆಸಿಬಿಗಳನ್ನು ಬಳಸಲಾಗುತ್ತಿದೆ. ಇನ್ನು, ಕಳೆದ ಎರಡು ದಿನದಿಂದ ಪೌರ ಕಾರ್ಮಿಕರು ನಿರಂತರವಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಹ್ಯಾದ್ರಿ ಕಾಲೇಜು ಮುಂಭಾಗ ಇದ್ದ ಹಂಪ್ಗಳನ್ನು ತೆರವು ಮಾಡಲಾಗುತ್ತಿದೆ.
ಇದನ್ನೂ ಓದಿ – ‘ನನ್ನ ಹೃದಯದಲ್ಲಿ ರಾಮ, ಮೋದಿ, ಅವರ ಹೃದಯದಲ್ಲಿ ಮಕ್ಕಳು, ಶೋಭಾ’, ಈಶ್ವರಪ್ಪ ಕೆಂಡಾಮಂಡಲ
ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200