SHIMOGA | 110 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆಗಳಿಗೆ ಆನ್ಲೈನ್ನಲ್ಲಿ ಚಾಲನೆ, ಯಾವಾಗ? ಎಲ್ಲೆಲ್ಲಿ ಸೇತುವೆ ಆಗ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOG NEWS | 08 FEBRUARY 2021

110 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆ ಮತ್ತು ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆ.15ರಂದು ದೆಹಲಿಯಿಂದ ಆನ್‍ಲೈನ್ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ನಾಲ್ಕು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಕೇಂದ್ರ ರೈಲೆ ಸಚಿವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಆನ್‍ಲೈನ್ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. ಈ ಮೇಲ್ಸೇತುವೆಗಳಿಂದಾಗಿ ಶಿವಮೊಗ್ಗದ ಬಹು ವರ್ಷದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಆಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ವಿಡಿಯೋ ರಿಪೋರ್ಟ್

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೇಯರ್ ಸುವರ್ಣಾ ಶಂಕರ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಹಲವರು ಸಭೆಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment