ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 MAY 2023
SHIMOGA : ಸಹ್ಯಾದ್ರಿ ಕಾಲೇಜಿನಲ್ಲಿ ಮೇ 13ರಂದು ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಕಾಲೇಜು ಮುಂಭಾಗ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ (Route Change) ಸೂಚಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪರ್ಯಾಯ ಮಾರ್ಗ ಯಾವುದು?
ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್ಸುಗಳು ಹಾಗೂ ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ (Route Change) ಮುಖಾಂತರ ಹೋಗುವುದು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ಸುಗಳು ಬಿ.ಹೆಚ್.ರಸ್ತೆ ಮಾರ್ಗವಾಗಿ ಬಸ್ಸ್ಟ್ಯಾಂಡ್ಗೆ ಹೋಗುವುದು.
ಹೊನ್ನಾಳಿ ದಾವಣಗೆರೆಯಿಂದ ಬರುವ ಭಾರೀ ವಾಹನ, ಎಲ್ಲಾ ಬಸ್ಗಳು 100 ಅಡಿ ರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು.
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್ಗಳು ಎಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.
ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು ಭದ್ರಾವತಿ ಎನ್.ಆರ್.ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ.
ಅಧಿಕಾರಿಗಳು, ಏಜೆಂಟರ ವಾಹನ ಪಾರ್ಕಿಂಗ್
ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು ಮತ್ತು ವಜ್ರ ಮಹೋತ್ಸವ ಕಟ್ಟಡದ ಎದುರು ಪಾರ್ಕಿಂಗ್ಗೆ ಅನುಮತಿ ನೀಡಿದೆ.
https://blogger.googleusercontent.com/img/b/R29vZ2xl/AVvXsEjKZa_K149AAW75RpAJpexAbqwoA_KGyqzbNUC4Kw8JQ3AYNHIH7N2oUDCuJWlHgFpxG2vkLIUQCUlFQQoA6rxgeWxklsCSi6tpHYn3HQC_pqrAFIMQsX_sFTCS5OHjIPjzY2UNRSSzd_XAiszhBKqoL4J5upCLk7gzIq4tSz-h5Pb6oEJvrQ0_ezci8w/s926/SAHYADRI%20COLLEGE1.jpg
ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಬಿ.ಹೆಚ್.ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ನಿಲುಗಡೆಗೆ ಅನುಮತಿ ನೀಡಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ ಯಂತ್ರಗಳಿಗೆ ಸೀಲ್, ಮುಂದೇನಿರುತ್ತೆ ಪ್ರಕ್ರಿಯೆ? ಎಲ್ಲೆಲ್ಲಿ ಎಷ್ಟಾಗಿದೆ ವೋಟಿಂಗ್? ಕಂಪ್ಲೀಟ್ ರಿಪೋರ್ಟ್
ಎಂ.ಆರ್.ಎಸ್.ಸರ್ಕಲ್ನ ಹತ್ತಿರವಿರುವ ಕೆಇಬಿ ಸಮುದಾಯ ಭವನದ ಹಿಂಭಾಗ ವಾಹನಗಳ ನಿಲುಗಡೆಗೆ ಅನುಮತಿ ನೀಡಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆಗೆ ಎಂಆರ್ಎಸ್ ನಿಂದ ಎನ್.ಆರ್.ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ಗೆ ಅನುಮತಿ ನೀಡಿದೆ.
ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲಾ ವಾಹನಗಳ ನಿಲುಗಡೆಗೆ ಅನುಮತಿ ನೀಡಿದೆ.
ಎಂ.ಆರ್.ಎಸ್.ಸರ್ಕಲ್ ನಿಂದ ಬಿ.ಹೆಚ್.ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.