ಗುಡ್ಡೇಕಲ್ ಆಡಿಕೃತ್ತಿಗೆ ಜಾತ್ರೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SHIMOGA | 22 ಜುಲೈ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ ಬದಲಾವಣೆ  (ROUTE CHANGE) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

Shimoga Nanjappa Hospital

ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ದೊಡ್ಡ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗಬಾರದು ಎಂಬ ಕಾರಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಜುಲೈ 23ರಂದು ಇಡೀ ದಿನ ವಾಹನಗಳ ಸಂಚಾರದ ಮಾರ್ಗ (ROUTE CHANGE) ಬದಲಾಯಿಸಲಾಗಿದೆ.

ಯಾವೆಲ್ಲ ಮಾರ್ಗ ಬದಲಾವಣೆಯಾಗಿದೆ?

⇒ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಸಿಟಿ ಬಸ್, ಖಾಸಗಿ ಬಸ್, ಇತರೆ ಭಾರಿ ವಾಹನಗಳು, ಕಾರುಗಳು ಬೈಪಾಸ್ ರಸ್ತೆ ಮೂಲಕ ಶಿವಮೊಗ್ಗ ನಗರದ ಕಡೆಗೆ ಹೋಗಬೇಕು.

⇒ ಶಿವಮೊಗ್ಗ ನಗರದ ಕಡೆಯಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ಕಡೆಗೆ ಹೋಗುವ ಎಲ್ಲಾ ಸಿಟಿ ಬಸ್ಸುಗಳು, ಖಾಸಗಿ ಬಸ್ಸುಗಳು, ಭಾರಿ ವಾಹನಗಳು ಮತ್ತು ಕಾರುಗಳು ಬೈಪಾಸ್ ರಸ್ತೆ ಮೂಲಕ ಹೋಗಬೇಕು.

⇒ ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಬಸ್ಸುಗಳು ಮತ್ತು ಭಾರಿ ವಾಹನಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ಮೂಲಕ ಶಿವಮೊಗ್ಗ ನಗರಕ್ಕೆ ತಲುಪಬಹುದು.

⇒ ಹೊಳೆಹೊನ್ನೂರು ಸರ್ಕಲ್’ನಿಂದ ಗುರುಪುರದ ಯಲವಟ್ಟಿ ಕ್ರಾಸ್ ವರೆಗೆ ಸಾರ್ವಜನಿಕ ವಾಹನಗಳು ಓಡಾಡದಂತೆ ನಿಷೇಧಿಸಲಾಗಿದೆ.

⇒ ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಆ ಕಡೆಗೆ ಹೋಗುವ ಎಲ್ಲಾ ಲಘು ವಾಹನಗಳು ಯಲವಟ್ಟಿ ದೊಡ್ಡ ತಾಂಡ ಕ್ರಾಸ್’ನಿಂದ ಯಲವಟ್ಟಿ ಸಣ್ಣ ತಾಂಡ, ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪದ ಮೂಲಕ ಬಿ.ಹೆಚ್.ರಸ್ತೆಗೆ ಸೇರಿಕೊಂಡು ಬೈಪಾಸ್ ರಸ್ತೆ ಮೂಲಕ ಶಿವಮೊಗ್ಗ ನಗರಕ್ಕೆ ತಲುಪಬೇಕು.

⇒ ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವ ಲಘು ವಾಹನಗಳು (ದ್ವಿಚಕ್ರ ವಾಹನಗಳು ಮತ್ತು ಕಾರುಗಳು) ಬೈಪಾಸ್ ರಸ್ತೆ ಮೂಲಕ ಮಲವಗೊಪ್ಪದ ಯಲವಟ್ಟಿ ಕ್ರಾಸ್ ನಿಂದ ಯಲವಟ್ಟಿ ಮಾರ್ಗವಾಗಿ ದೊಡ್ಡತಾಂಡ ಕ್ರಾಸ್ ಮೂಲಕ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗಬೇಕು.

⇒ ಹರಿಹರ ಹೊನ್ನಾಳಿಯಿಂದ ಬರುವ ಎಲ್ಲಾ ಭಾರಿ ವಾಹನಗಳು ಮತ್ತು ಬಸ್ಸುಗಳು 100 ಅಡಿ ರಸ್ತೆ, ವಿನೋಬನಗರ ಮಾರ್ಗವಾಗಿ ತೆರಳಬೇಕು.

⇒ ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು, ಚನ್ನಗಿರಿ, ಚಿತ್ರದುರ್ಗಕ್ಕೆ ಹೋಗುವ ಮತ್ತು ಬರುವ ಎಲ್ಲಾ ಭಾರಿ ವಾಹನಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಹೊನ್ನಾಳಿ ರಸ್ತೆ, ಹೊಳಲೂರು, ತುಂಗಭದ್ರ ಸೇತುವೆ, ಸನ್ಯಾಸಿಕೋಡುಮಗ್ಗಿ, ಹೊಳೆಹೊನ್ನೂರು ಮೂಲಕ ಸಂಚರಿಸಬೇಕು.

ಇದನ್ನೂ ಓದಿ – ಗುಡ್ಡೆಕಲ್ಲಿನಲ್ಲಿ ಆಡಿಕೃತ್ತಿಗೆ ಜಾತ್ರೆಗೆ ಅಂತಿಮ ಸಿದ್ಧತೆ, ಹರೋ ಹರ ಸ್ಮರಣೆಗೆ ಕ್ಷಣಗಣನೆ

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment