ಶಿವಮೊಗ್ಗದಲ್ಲಿ ರೌಡಿ ಪರೇಡ್, ಕೆಲವರಿಗೆ ಡಿಸೆಂಬರ್ ತನಕ ಗಡುವು, ಇನ್ನೂ ಕೆಲವರ ಮೇಲೆ ನಿಗಾ ಹೆಚ್ಚಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 3 ಜುಲೈ 2022

ಬಕ್ರೀದ್, ಗಣೇಶೋತ್ಸವ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ರೌಡಿಗಳ (ROWDY PARADE) ಮೇಲೆ ಪೊಲೀಸರು ಹೆಚ್ಚಿನ ನಿಗಾ ಇರಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ರೌಡಿ ಪರೇಡ್ ಮಾಡಿ, ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

Shimoga Nanjappa Hospital

ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ರೌಡಿ ಪರೇಡ್ ನಡೆಸಲಾಯಿತು. 175 ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಪ್ರತಿಯೊಬ್ಬರ ಮಾಹಿತಿ ಪಡೆದ ಜಿಲ್ಲಾ ರಕ್ಷಣಾಧಿಕಾರಿ ಅವರು, ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸುವಂತೆ ಖಡಕ್ ಎಚ್ಚರಿಕೆ ನೀಡಿದರು.

ಆರು ಠಾಣೆ ವ್ಯಾಪ್ತಿಯ ರೌಡಿಗಳು

ಶಿವಮೊಗ್ಗ ಉಪ ವಿಭಾಗದ ಆರು ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು (ROWDY PARADE) ಇವತ್ತು ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ದೊಡ್ಡಪೇಟೆ, ಕೋಟೆ, ವಿನೋಬನಗರ, ಜಯನಗರ, ತುಂಗಾ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳಿದ್ದರು. ಆಯಾ ಠಾಣೆಗಳ ವ್ಯಾಪ್ತಿಯ ರೌಡಿಗಳನ್ನು ಪ್ರತ್ಯೇಕವಾಗಿ ನಿಲ್ಲಿಸಿ ವಿಚಾರಣೆ ನಡೆಸಲಾಯಿತು.

ಡಿಸೆಂಬರ್ ತನಕ ಗುಡುವು

ಪರೇಡ್’ನಲ್ಲಿ ಭಾಗವಹಿಸಿದ್ದ ರೌಡಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಖಡಕ್ ಎಚ್ಚರಿಕೆ ನೀಡಿದರು. ಅಲ್ಲದೆ ಕೆಲವರಿಗೆ ಡಿಸೆಂಬರ್ ತನಕ ಗಡುವು ನೀಡಿದ್ದಾರೆ. ‘ರೌಡಿ ಪರೇಡ್’ನಲ್ಲಿ ಪಾಲ್ಗೊಂಡಿರುವ ಕೆಲವರು ಎಲ್ಲಾ ಚಟುವಟಿಕೆ ನಿಲ್ಲಿಸಿದ್ದಾರೆ. ಅವರ ಕುರಿತು ಪಟ್ಟಿ ಸಿದ್ಧಪಡಿಸಿಕೊಂಡಿದ್ದೇವೆ. ಡಿಸೆಂಬರ್ ತನಕ ಅವರ ಮೇಲೆ ನಿಗಾ ವಹಿಸಲಾಗುತ್ತದೆ. ಯಾವುದೆ ಕಾನೂನು ಬಾಹಿರ ಚಟುವಟಿಕೆ ನಡೆಸದೆ ಇದ್ದರೆ ಅವರನ್ನು ರೌಡಿ ಪಟ್ಟಿಯಿಂದ ಹೊರಗಿಡುವ ಕಾರ್ಯ ನಡೆಯಲಿದೆ’ ಎಂದು ತಿಳಿಸಿದರು.

ಮನೆ ಬಾಗಿಲಿಗೆ ಹೋಗಿ ಪರಿಶೀಲನೆ

ಕಾನೂನು ಬಾಹಿರ ಚಟುವಟಿಕೆಯಲ್ಲಿ ನಿರಂತರವಾಗಿ ತೊಡಗಿರುವವರಿಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಖಡಕ್ ಎಚ್ಚರಿಕೆ ನೀಡಿದರು. ‘ರೌಡಿ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ನಿರಂತರ ನಿಗಾ ವಹಿಸಲಾಗುತ್ತದೆ. ಅವರು ಯಾರೊಂದಿಗೆ ಸೇರುತ್ತಾರೆ, ಸಹಚರರು ಯಾರು, ಎಲ್ಲಿ ಸೇರುತ್ತಾರೆ ಅನ್ನುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತದೆ. ನಿರಂತರವಾಗಿ ಪರಿಶೀಲನೆ ನಡೆಯಲಿದೆ. ಮನೆಗಳಿಗೂ ತೆರಳಿ ಪರಿಶೀಲನೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಗಾಂಜಾಗೆ ಕಡಿವಾಣ ಹಾಕಲು ಯತ್ನ

ಜಿಲ್ಲೆಯಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದ್ದು, ಇದರ ಕಡಿವಾಣಕ್ಕೂ ಕ್ರಮ ಕೈಗೊಳ್ಳಲಾಗಿದೆ. ರೌಡಿ ಪರೇಡ್’ಗೆ ಬಂದಿದ್ದವರ ಪೈಕಿ ಕೆಲವರು ಗಾಂಜಾ ಸೇವನೆ ಮಾಡುವ ಶಂಕೆ ಇದ್ದು, ಅಂತಹವರ ವಿರುದ್ಧ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅವರು ತಿಳಿಸಿದರು.

ಸಾಲು ಸಾಲು ಹಬ್ಬದ ಹಿನ್ನೆಲೆ ನಿಗಾ

ಇನ್ಮುಂದೆ ಸಾಲು ಸಾಲು ಹಬ್ಬಗಳು ಬರಲಿವೆ. ಈ ಹಿನ್ನೆಲೆಯಲ್ಲಿ ರೌಡಿಗಳ ಮೇಲೆ ಹೆಚ್ಚು ನಿಗಾ ವಹಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ‘ಕೋಮು ಸೂಕ್ಷ್ಮ ಇರುವುದರಿಂದ ರೌಡಿಗಳ ಮೇಲೆ ಹೆಚ್ಚು ಗಮನ ವಹಿಸಿದ್ದೇವೆ. ಬಕ್ರೀದ್, ಗಣೇಶ ಹಬ್ಬ, ಈದ್ ಮಿಲಾದ್ ಹಬ್ಬಗಳಿವೆ. ಬಕ್ರೀದ್ ಹಿನ್ನೆಲೆಯಲ್ಲಿ ಗೋವುಗಳ ಸಾಗಣೆ ಮಾಡುವ ಸದ್ಯತೆ ಇರುವುದರಿಂದ, ಅಂತಹವರಿಗೆ ಎಚ್ಚರಿಕೆ ನೀಡಲಾಗಿದೆ. ಕೆಲವರ ಮೇಲೆ ಗೂಂಡಾ ಕಾಯ್ದೆ ಹಾಕಲಾಗುತ್ತಿದೆ. ಈಗಾಗಲೇ ಚೋರ್ ಸಲೀಂ ಎಂಬಾತನ ವಿರುದ್ಧ ಗೂಂಡಾ ಕಾಯ್ದೆ ಹಾಕಲಾಗಿದೆ. ಕಡೇಕಲ್ ಹಬೀಬ್ ಎಂಬಾತನ ವಿರುದ್ಧ ಗೂಂಡಾ ಕಾಯ್ದೆ ಹಾಕಲು ಶಿಫಾರಸು ಮಾಡಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಾದ್ಯಂತ ಸುಮಾರು 1400 ರೌಡಿಗಳಿದ್ದಾರೆ. ಶಿವಮೊಗ್ಗ ಉಪ ವಿಭಾಗದಲ್ಲಿಯೇ ಸುಮಾರು 800 ರೌಡಿಗಳಿದ್ದಾರೆ.

ಇದನ್ನೂ ಓದಿ – ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದ ಲಾರಿ, ಮುಂಭಾಗ ನುಜ್ಜುಗುಜ್ಜು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 3, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment