ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೌಡಿ ಪರೇಡ್ (Rowdy Parade) ಮಾಡಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ನಗರದಲ್ಲಿ 144 ಜನ, ಭದ್ರಾವತಿಯಲ್ಲಿ 79 ಮತ್ತು ಸಾಗರದಲ್ಲಿ 40 ರೌಡಿಗಳು ಸೇರಿ ಒಟ್ಟು 263 ಜನ ರೌಡಿಗಳು ಹಾಜರಿದ್ದರು. ಪರೇಡ್‌ನಲ್ಲಿ ಹಾಜರಿದ್ದ ರೌಡಿಗಳ ಹಾಲಿ ವಿಳಾಸ, ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸಗಳ ಕುರಿತು ಮಾಹಿತಿ ಪಡೆಯಲಾಯಿತು. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಯಾವುದಾದರೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ಸಹ ಪರಿಶೀಲನೆ ನಡೆಸಲಾಯಿತು.
ಇದನ್ನೂ ಓದಿ – ಶಿವಮೊಗ್ಗ ಬಸ್ ನಿಲ್ದಾಣ ಸುತ್ತಮುತ್ತ ಪೊಲೀಸ್, ಆರೋಗ್ಯಾಧಿಕಾರಿಗಳಿಂದ ದಿಢೀರ್ ದಾಳಿ, 32 ಕೇಸ್ ದಾಖಲು
ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂದರ್ಭ ಯಾವುದೇ ಕಾನೂನು ಬಾಹಿರ ಚಟುವಟಿಕೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರದಂತೆ ಎಚ್ಚರಿಕೆ ನೀಡಲಾಯಿತು. ಯಾವುದಾದರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಬಂದಲ್ಲಿ ಕಠಿಣ ಜರುಗಿಸಲಾಗುವುದೆಂದು ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಎಚ್ಚರಿಸಿದರು.
ಹೆಚ್ಚುವರಿ ರಕ್ಷಣಾಧಿಕಾರಿ ಆನಿಲ್ ಕುಮಾರ್ ಭೂಮರಡ್ಡಿ, ಶಿವಮೊಗ್ಗ ಬಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಸುರೇಶ್, ಈ ಭದ್ರಾವತಿ ಡಿವೈಎಸ್‌ಪಿ ನಾಗರಾಜ್, ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.
ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಈ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರು ಅಪಘಾತ ಫಿಕ್ಸ್