ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ವತಿಯಿಂದ ಶಿವಮೊಗ್ಗ ನಗರದಲ್ಲಿ ಪಥ ಸಂಚಲನ (March Past) ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ ಸೇರಿದಂತೆ ಹಲವು ಪ್ರಮುಖರು ಗಣವೇಷ ಧರಿಸಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಪಥ ಸಂಚಲನ ಆರಂಭವಾಯಿತು. ನಗರದ ಎಸ್ಪಿಎಂ ರಸ್ತೆ, ಗಾಂಧಿ ಬಜಾರ್, ಸಿದ್ದಯ್ಯ ರಸ್ತೆ, ಎಂಕೆಕೆ ರಸ್ತೆ, ಎಎ ಸರ್ಕಲ್, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ, ತಿರುಪಳಯ್ಯನ ಕೇರಿ, ಅಶೋಕ ರಸ್ತೆ ಮೂಲಕ ಪಥ ಸಂಚಲನ ಸಾಗಿತು.
ಇದನ್ನೂ ಓದಿ – ವಿವಿಧ ಜಿಲ್ಲೆಗಳಿಗೆ 34 ವಿಶೇಷ ರೈಲುಗಳು, ಹೆಚ್ಚುವರಿ ಬೋಗಿಗಳು, ಎಲ್ಲೆಲ್ಲಿಗೆ ಸ್ಪೆಷಲ್ ಟ್ರೈನ್ ಸಂಚರಿಸಲಿದೆ?
ಖಾಕಿ ಪ್ಯಾಂಟ್, ಬಿಳಿ ಶರ್ಟ್, ಲಾಠಿ ಹಿಡಿದು ಆರ್ಎಸ್ಎಸ್ ಕಾರ್ಯಕರ್ತರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಬ್ಯಾಂಡ್ಗೆ ತಕ್ಕ ಹಾಗೆ ಆರ್ಎಸ್ಎಸ್ ಕಾರ್ಯಕರ್ತರು ಹೆಜ್ಜೆ ಹಾಕಿದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಆರ್ಎಸ್ಎಸ್ನ ಪ್ರಮುಖರು, ವಿವಿಧ ಶಾಖೆಗಳ ಕಾರ್ಯಕರ್ತರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಆರ್ಎಸ್ಎಸ್ ಪಥ ಸಂಚಲನದ ಹಿನ್ನೆಲೆ ನಗರದ ವಿವಿಧೆಡೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.