ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 20 OCTOBER 2024 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ವಾರ್ಷಿಕ ಪಥ ಸಂಚಲನ ನಡೆಯಿತು. ಜೋರು ಮಳೆಯ ಮಧ್ಯೆ ಪಥ ಸಂಚಲನ ನಡೆಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘದ ಪಕ್ಕದ ತಾನಾಜಿ ಸಂಘ ಸ್ಥಾನದಿಂದ ಪಥ ಸಂಚಲನ ಆರಂಭವಾಯಿತು. ಗಾಂಧಿ ಬಜಾರ್, ಅಶೋಕ ರಸ್ತೆ, ಬಿ.ಹೆಚ್.ರಸ್ತೆ ಮೂಲಕ ಮೈಲಾರೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು.
ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್ ರೌಂಡ್ಸ್
ಆರ್ಎಸ್ಎಸ್ ಕಾರ್ಯಕರ್ತರು ಗಣವೇಷಧಾರಿಗಳಾಗಿ ಪಥ ಸಂಚಲನದಲ್ಲಿ ಭಾಗಹಿಸಿದ್ದರು. ಬ್ಯಾಂಡ್ ತಂಡ ಮೆರವಣಿಗೆಯಲ್ಲಿ ಭಾಗವಹಿಸಿತ್ತು. ಜೀಪ್ನಲ್ಲಿ ಆರ್ಎಸ್ಎಸ್ ಸಂಸ್ಥಾಪಕರು, ಭಾರತ ಮಾತೆಯ ಭಾವಚಿತ್ರಗಳ ಮೆರವಣಿಗೆ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಗಣವೇಷಧಾರಿಗಳಾಗಿ ದಂಡ ಹಿಡಿದು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ರಸ್ತೆಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು