SHIVAMOGGA LIVE NEWS | 7 APRIL 2023
SHIMOGA : ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಲಕ್ಷಾಂತರ ಜನರನ್ನು ಕರೆತರಲಾಗಿತ್ತು. ಇದಕ್ಕಾಗಿ ಸಾವಿರಾರು ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು. ಈ ಬಸ್ಸುಗಳ ಖರ್ಚು (Bus Rent), ವೆಚ್ಚದ ಕುರಿತು ಕಾನೂನು ವಿದ್ಯಾರ್ಥಿಯೊಬ್ಬರು ಮಾಹಿತಿ ಹಕ್ಕು ಅಡಿ ಮಾಹಿತಿ ಪಡೆದಿದ್ದಾರೆ.
ಶಿವಮೊಗ್ಗದ ಕಾನೂನು ವಿದ್ಯಾರ್ಥಿ ಆಕಾಶ್ ಆರ್.ಪಾಟೀಲ್ ಅವರು ಆರ್ಟಿಐ ಮೂಲಕ ಬಸ್ಸುಗಳ ಕುರಿತು ಮಾಹಿತಿ ಪಡೆದಿದ್ದಾರೆ. ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಜನರನ್ನು ಕರೆತರಲು ಎಷ್ಟು ಬಸ್ಸುಗಳನ್ನು (Bus Rent) ಬಳಸಲಾಗಿತ್ತು, ಅದಕ್ಕೆ ವೆಚ್ಚವಾಗಿದ್ದೆಷ್ಟು ಮತ್ತು ಹಣ ಪಾವತಿಸಿದವರಾರು ಎಂದು ಮಾಹಿತಿ ಕೇಳಿದ್ದರು.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಆರ್ಟಿಐನಲ್ಲಿ ಬಂದ ಉತ್ತರವೇನು?
ಆರ್ಟಿಐ ಮೂಲಕ ಆಕಾಶ್ ಪಾಟೀಲ್ ಅವರು ಕೇಳಿದ ಪ್ರಶ್ನೆಗಳಿಗೆ ಕೆಎಸ್ಆರ್ಟಿಸಿ ಶಿವಮೊಗ್ಗ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ವಿವಿಧೆಡೆಯಿಂದ ವಿಮಾನ ನಿಲ್ದಾಣಕ್ಕೆ ಜನರನ್ನು ಕರೆತರಲು 1600 ಕೆಎಸ್ಅರ್ಟಿಸಿ ಬಸ್ಸುಗಳನ್ನು ಬಳಕೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?
ಇಷ್ಟು ಬಸ್ಸುಗಳ ಬಾಡಿಗೆ ಮೊತ್ತ 3,93,92,565 ರೂ. ಎಂದು ತಿಳಿಸಲಾಗಿದೆ. ಕಾರ್ಯಪಾಲಕ ಇಂಜಿನಿಯರ್ ಅವರು ಬಾಡಿಗೆ ಹಣ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದು ಶಿವಮೊಗ್ಗ ಜಿಲ್ಲೆಯಲ್ಲಿ ಬಾಡಿಗೆಗೆ ಪಡೆದ ಕೆಎಸ್ಆರ್ಟಿಸಿ ಬಸ್ಸುಗಳ ಮಾಹಿತಿ. ಅಕ್ಕಪಕ್ಕದ ಜಿಲ್ಲೆಗಳಿಂದಲು ಜನರನ್ನು ಕರೆತರಲು ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಸುಗಳು, ಇತರೆ ವಾಹನಗಳನ್ನು ಬಳಕೆ ಮಾಡಲಾಗಿತ್ತು. ಇವುಗಳ ಲೆಕ್ಕ ಮತ್ತು ವೆಚ್ಚ ಇನ್ನಷ್ಟು ಹೆಚ್ಚಾಗಲಿದೆ.
ಆರ್ಟಿಐ ಅರ್ಜಿ ಹಾಕಿದ್ದೇಕೆ?
ಇನ್ನು, ಆರ್ಟಿಐ ಅರ್ಜಿ ಸಲ್ಲಿಸಲು ಕಾರಣವೇನು ಎಂಬುದರ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕಾನೂನು ವಿದ್ಯಾರ್ಥಿ ಆಕಾಶ್ ಪಾಟೀಲ್, ‘ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳನ್ನು ಬಳಕೆ ಮಾಡಲಾಗಿತ್ತು. ಆದರೆ ಬಿಲ್ ಪಾವತಿಯಾಗಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೂ ಕೆಎಸ್ಆರ್ಟಿಸಿ ಬಸ್ಸುಗಳನ್ನು (Bus Rent) ಬಳಸಲಾಗಿತ್ತು. ಹಾಗಾಗಿ ಕುತೂಹಲಕ್ಕೆ ಅರ್ಜಿ ಸಲ್ಲಿಸಿದ್ದೆ’ ಎಂದು ತಿಳಿಸಿದರು.
ಲಕ್ಷಾಂತರ ಜನ ಬಂದಿದ್ದರು
ಫೆ.27ರಂದು ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಾಗಿತ್ತು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಲಕ್ಷಾಂತರ ಜನರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಸಾವಿರಾರು ಬಸ್ಸು, ಕಾರು ಸೇರಿ ವಿವಿಧ ವಾಹನಗಳು ವಿಮಾನ ನಿಲ್ದಾಣದ ಕಡೆಗೆ ಬಂದಿದ್ದರಿಂದ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಗಾಗಿ ಸಾವಿರಾರು ಜನರು ವಿಮಾನ ನಿಲ್ದಾಣವನ್ನು ತಲುಪಲಾಗದೆ ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯಬೇಕಾಗಿತ್ತು.