ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
SHIMOGA | ನಗರದಲ್ಲಿ ಆಟೋಗಳಿಗೆ ಮೀಟರ್ (AUTO METER) ಅಳವಡಿಕೆ ಕಡ್ಡಾಯ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಹೇಳಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನ ಸ್ಪಂದನಾ ಸಭೆಯಲ್ಲಿ ಅವರು ಮಾತನಾಡಿ, ಆಟೋಗಳಿಗೆ ಮೀಟರ್ (AUTO METER) ಕಡ್ಡಾಯ ಮಾಡುವುದು ಕೇವಲ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಸಾಧ್ಯವಿಲ್ಲ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅಭಿಪ್ರಾಯಗಳು ಮುಖ್ಯವಾಗಿರುವುದರಿಂದ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು. ಅಲ್ಲಿವರೆಗೆ ಸಾರ್ವಜನಿಕರಿಂದ ಅಧಿಕ ಹಣ ವಸೂಲಿ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ದರ ಪರಿಷ್ಕರಣೆಗೆ ಅರ್ಜಿ ಕೊಡಿ (AUTO METER)
2019ರಲ್ಲಿ ಸಾರಿಗೆ ಇಲಾಖೆ ನಗರದಲ್ಲಿ ಆಟೋದಲ್ಲಿ 1 ಕಿ.ಮೀ ದೂರು ಪಯಣಿಸಲು 15ರು. 2 ಕಿ.ಮೀಗೆ 20 ರು. ದರ ನಿಗದಿ ಪಡಿಸಿದೆ. ಆದರೆ, ಆಟೋ ಚಾಲಕರು 30 ರು. ಪಡೆಯುವ ಬದಲಾಗಿ 80-100 ರು. ಪಡೆದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ನಾನಾ ಕಾರಣಗಳು ಇರಬಹುದು. ಆದರೆ, ಜನರಿಂದ ಅಧಿಕ ಹಣ ವಸೂಲಿ ಮಾಡುವುದು ಅಪರಾಧವಾಗುತ್ತದೆ. ಈ ಹಿನ್ನೆಲೆ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಯುವಕನಿಗೆ ಚಾಕು ಇರಿತ, ಎಲ್ಲಿ? ಕಾರಣವೇನು?
ಆಟೋ ಪ್ರಯಾಣ ದರ ಪರಿಷ್ಕರಣೆಯಾಗಿ ಮೂರು ವರ್ಷಗಳು ಕಳೆದಿವೆ. ಆದರೆ, ಈಗ ಗ್ಯಾಸ್, ಪೆಟ್ರೋಲ್ ಬೆಲೆ ಗನಕ್ಕೆ ಏರಿವೆ. ದುಬಾರಿ ತೈಲ ಬೆಲೆಯಿಂದ ನಮಗೆ ಸಾಕಷ್ಟು ಸಮಸ್ಯೆಗಳಾಗುತ್ತಿವೆ. ನೀವು ದರ ಪರಷ್ಕರಣೆ ಮಾಡದೇ ಹಳೇ ದರದಲ್ಲೇ ಆಟೋ ಓಡಿಸಿ ಎಂದರೆ ಕಷ್ಟವಾಗುತ್ತದೆ ಎಂದು ಆಟೋ ಚಾಲಕರು ಅಧಿಕಾರಿಗಳ ಬಳಿ ಅಳಲು ತೋಡಿಕೊಂಡರು.
ಸಾರಿಗೆ ಇಲಾಖೆ ನಿಗದಿಪಡಿಸಿದ ದರ ಪರಿಷ್ಕರಣೆ ಆಗಬೇಕಾದರೆ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಪರಿಷ್ಕರಣೆ ಮಾಡಿಕೊಳ್ಳಬಹುದು. ದರ ಪರಿಷ್ಕರಣೆ ಆಗದಿರುವ ಕಾರಣ ಇಟ್ಟುಕೊಂಡು ಸಾರ್ವಜನಕರಿಂದ ಹಣ ವಸೂಲಿ ಮಾಡುವುದು ಸರಿಯಲ್ಲ ಎಂದು ಜೆ.ಪಿ.ಗಂಗಾಧರ್ ತಿಳಿಸಿದರು.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು, ಆಟೋ ಚಾಲಕರು ಹಾಜರಿದ್ದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.