ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 MAY 2024
SHIMOGA : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ. ಇನ್ನು ನಾಲ್ಕು ವರ್ಷ ಸುಭದ್ರವಾಗಿ ಸರ್ಕಾರ ನಡೆಯಲಿ ಎಂದು ಯುವ ಕಾಂಗ್ರೆಸ್ ವತಿಯಿಂದ ರುದ್ರಾಭಿಷೇಕ (Rudrabhisheka) ನೆರವೇರಿಸಲಾಯಿತು.
ವೀರಶೈವ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಕಾಶಿ ವಿಶ್ವನಾಥ ದೇಗುಲದಲ್ಲಿ ರುದ್ರಾಭೀಷೇಕ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಾರದರ್ಶಕ ಆಡಳಿತ ನಡೆಸುತ್ತಿದ್ದಾರೆ. ಸಚಿವರು, ಶಾಸಕರೆ ನೇತೃತ್ವದ ಗ್ಯಾರೆಂಟಿ ಸರ್ಕಾರ ಇನ್ನೂ ನಾಲ್ಕು ವರ್ಷ ಸುಭದ್ರವಾಗಿ ಜನರ ಸೇವೆ ಮಾಡಲಿ ಎಂದರು.
ಇದನ್ನೂ ಓದಿ – ಕಾಲೇಜು ಸಮೀಪ ಅಂಗಡಿಗೆ ದಿಢೀರ್ ಭೇಟಿ ನೀಡಿದ ಶಾಸಕ, ಖಡಕ್ ವಾರ್ನಿಂಗ್, ಕಾರಣವೇನು?
ಪ್ರಮುಖರಾದ ಕೆ.ರಂಗನಾಥ್, ಪಂಚ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ಪ್ರಮುಖರಾದ ಕೆ.ಎಲ್.ಪವನ್, ಗುರುಪ್ರಸಾದ್, ಧರ್ಮ ಬೊಮ್ಮನಕಟ್ಟೆ, ವಸಂತ, ಸುಹಾಸ್ ಗೌಡ, ರಾಹುಲ್ ಸೀಗೆಹಟ್ಟಿ, ರಾಜೇಶ್ ಮಂದಾರ, ವಿನಯ್, ಕಾರ್ತಿಕ್ ,ಪ್ರಶಾಂತ್, ಜ್ಞಾನ ಶೇಖರ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






