ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA PRAYER | 26 ಏಪ್ರಿಲ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ರವೀಂದ್ರನಗರ ಶ್ರೀ ಗಣಪತಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಏ.30ರಂದು ಬೆಳಗ್ಗೆ 11 ಗಂಟೆಯಿಂದ ಶ್ರೀ ರುದ್ರಹೋಮ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಅ.ಪ.ರಾಮಭಟ್ಟ ಅವರು ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ.ಪ.ರಾಮಭಟ್ಟ ಅವರು, ಭಜನಾ ಪರಿಷತ್, ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಅರ್ಚಕವೃಂದ, ಸಂಸ್ಕಾರ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಹೋಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಲೋಕಕಲ್ಯಾಣಾರ್ಥವಾಗಿ ಶತಕೋಟಿ ಓಂ ನಮಃ ಶಿವಾಯ ಜಪ ಯಜ್ಞ ನಡೆಯುತ್ತಿದೆ. ಇದರ ಅಂಗವಾಗಿ ರುದ್ರಹೋಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹರಿಹರಪುರ ಶ್ರೀ ಕ್ಷೇತ್ರದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಏ.30ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಪೂಜೆ, ಗೋ ಪೂಜೆ, ಹೋಮ ಮುಂತಾದ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ. 11 ಗಂಟೆಗೆ ಶ್ರೀ ರುದ್ರಹೋಮ, ಮಹಾಪೂರ್ಣಾಹುತಿ ನಡೆಯಲಿದೆ. 11.30ಕ್ಕೆ ಕಾರ್ಕಳದ ವಾಗ್ಮಿ ಆದರ್ಶ ಗೋಕಲೆ ಯವರಿಂದ ಧಾರ್ಮಿಕ ಉಪನ್ಯಾಸವಿರುತ್ತದೆ ಎಂದರು.
ಭಜನಾ ಪರಿಷತ್ನ ಉಪಾಧ್ಯಕ್ಷ ಎನ್.ಶ್ರೀಧರ್, ಭಜನಾ ಪರಿಷತ್ನ ಕಾರ್ಯದರ್ಶಿ ಶಬರೀಶ್ ಕಣ್ಣನ್, ದೇವಸ್ಥಾನ ಸಮಿತಿಯ ಮುಖ್ಯಸ್ಥ ಉಮಾಪತಿ, ಸತೀಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಇದನ್ನೂ ಓದಿ – ಗಾಜನೂರು ಡ್ಯಾಂ ಭರ್ತಿ, ಯಾವುದೆ ಕ್ಷಣದಲ್ಲಿ ನೀರು ಹೊರಬಿಡುವ ಎಚ್ಚರಿಕೆ