ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹರ್ಷ ಹತ್ಯೆ ಮತ್ತು ಉದ್ವಿಗ್ನ ಪರಿಸ್ಥಿತಿ ಬೆನ್ನಿಗೆ, ಜಿಲ್ಲಾ ರಕ್ಷಣಾಧಿಕಾರಿ ಅವರ ವರ್ಗಾವಣೆಯಾಗಿದೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಐಪಿಎಸ್ ಅಧಿಕಾರಿ ಯತೀಶ್ ಚಂದ್ರ ಅವರು ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ನೇಮಕವಾಗಿದ್ದಾರೆ ಎಂದು ಹಬ್ಬಿದೆ.
ಹರ್ಷ ಹತ್ಯೆ ನಂತರದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಹರಸಾಹಸ ಪಟ್ಟಿತು. ಹತ್ಯೆ ಸಂಬಂಧ ಈವರೆಗೂ 8 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಗಲಭೆ ನಡೆಸಿದವರಿಗೆ ಶೋಧ ಕಾರ್ಯ ನಡೆಯುತ್ತಿದೆ.
ವೈರಲ್ ಆಯ್ತು ಪೋಸ್ಟ್
ಹತ್ಯೆ ಆರೋಪಿಗಳ ಬಂಧನ. ಗಲಭೆ ಮಾಡಿದವರ ಹೆಡೆಮುರಿ ಕಟ್ಟಲು ನಿಂತಿರುವ ಪೊಲೀಸ್ ಇಲಾಖೆ ಬಗ್ಗೆ ಸಂಸದ ರಾಘವೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆ ನಡುವೆ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ವರ್ಗವಾಣೆ ಆಗಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ. ಆ ಜಾಗಕ್ಕೆ ದಾವಣಗೆರೆ ಮೂಲದ ಐಪಿಎಸ್ ಅಧಿಕಾರಿ ಯತೀಶ್ ಚಂದ್ರ ಅವರನ್ನು ವರ್ಗಾಯಿಸಲಾಗಿದೆ ಎಂದು ಹಬ್ಬಿದೆ.
ಕೇರಳದಿಂದ ಕರ್ನಾಟಕಕ್ಕೆ
ಯತೀಶ್ ಚಂದ್ರ ಅವರು ಕೇರಳ ಕೇಡರ್ ಐಪಿಎಸ್ ಅಧಿಕಾರಿ. ಇಂಟರ್ ಕೇಡರ್ ಡೆಪ್ಯುಟೇಷನ್ ಮೇರೆಗೆ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಮೂರು ವರ್ಷ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುದ ಬಳಿಕ, ಕೇರಳ ರಾಜ್ಯದ ಸೇವೆಗೆ ತೆರಳಲಿದ್ದಾರೆ. ಈ ಮಧ್ಯೆ ಅವರ ಹೆಸರನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.
ವರ್ಗ ಆಗಿರುವುದು ನಿಜಾನಾ?
ಯತೀಶ್ ಚಂದ್ರ ಅವರ ವರ್ಗಾವಣೆ ಸಂಬಂಧದ ಪೋಸ್ಟ್’ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವರು ಇದನ್ನು ನಿಜ ಎಂದು ನಂಬಿಕೊಂಡಿದ್ದಾರೆ. ಕೆಲವು ಮಾಧ್ಯಮಗಳಲ್ಲಿಯು ಈ ಕುರಿತು ಸುದ್ದಿ ಪ್ರಕಟವಾಗಿದೆ. ಆದರೆ ‘ಜಿಲ್ಲಾ ರಕ್ಷಣಾಧಿಕಾರಿ ಅವರ ವರ್ಗಾವಣೆ ಸಂಬಂಧ ಸರ್ಕಾರ ಯಾವುದೆ ಆದೇಶ ಪ್ರಕಟಿಸಿಲ್ಲ. ವೈರಲ್ ವಿಚಾರವನ್ನು ಗಮನದಲ್ಲಿ ಇರಿಸಿಕೊಂಡು ಐಪಿಎಸ್ ಅಧಿಕಾರಿಗಳ ವರ್ಗಾವಣೆಯನ್ನು ಮಾಡುವುದಿಲ್ಲ’ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರು ಸಮರ್ಥವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವರ್ಗಾವಣೆ ಸಂಬಂಧ ಸರ್ಕಾರ ಯಾವುದೆ ಆದೇಶವನ್ನು ಹೊರಡಿಸಿಲ್ಲ. ಹರ್ಷ ಹತ್ಯೆ ಬೆನ್ನಿಗೆ ಹಲವು ಪೋಸ್ಟ್’ಗಳು ವರೈಲ್ ಆಗುತ್ತಿವೆ. ಬಹುತೇಕ ಸುಳ್ಳು ಸುದ್ದಿಗಳು ಹಬ್ಬುತ್ತಿದ್ದು, ಜನರಲ್ಲಿ ಗೊಂದಲ ಉಂಟು ಮಾಡುತ್ತಿದೆ.
ಇದನ್ನೂ ಓದಿ | ‘ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಅಂದಿದ್ದರು, ಕಲ್ಲು ತೂರಾಟದಿಂದ ಜಿಲ್ಲೆಗೆ ಕೆಟ್ಟ ಹೆಸರು’