SHIVAMOGGA LIVE NEWS | 27 JANUARY 2024
SHIMOGA : ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರಿಗೆ ಇಂದು ಅಮೃತಮಯಿ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ಹಾಗೂ ಅವರ ಬದುಕು-ಸಾಧನೆ ಕುರಿತ ದಿ ಐರನ್ ಮ್ಯಾನ್ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ.
ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಶನ್ ಹಾಲ್‌ನಲ್ಲಿ ಬೆಳಗ್ಗೆ 10.30ರಿಂದ ಸಂವಾದ ಕಾರ್ಯಕ್ರಮ ನಡೆಯಲಿದೆ. ಪಕ್ಕದ ಮೈದಾನದಲ್ಲಿ ಸಂಜೆ 5.30ಕ್ಕೆ ಅಭಿನಂದನಾ ಸಮಾರಂಭ ನಡೆಯಲಿದೆ.
ಯಾವೆಲ್ಲ ವಿಷಯದ ಸಂವಾದ ನಡೆಯಲಿದೆ?
ಬೆಳಗ್ಗೆ 10.30 ರಿಂದ ಶ್ರಮದಿಂದ ಸಾರ್ಥಕತೆಯೆಡೆಗೆ ಶೀರ್ಷಿಕೆಯಡಿ ಯವಕರಿಗೆ ಮಾರ್ಗದರ್ಶಿ ವಿಚಾರಗೋಷ್ಠಿ ನಡೆಯಲಿದೆ. ರುದ್ರೇಗೌಡರ ವ್ಯಕ್ತಿತ್ವದ ಭಾಗವಾದ ರಾಜಕಾರಣ, ಸಮಾಜಸೇವೆ, ಕೈಗಾರಿಕೆಗಳ ಕುರಿತು ಚರ್ಚೆಗಳನ್ನು ಯುವಕರಿಗಾಗಿ ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಮೂವರು ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ಯುವಕ-ಯುವತಿಯರೊಂದಿಗೆ ಸಾಕಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್ ಅವರು ಮೌಲ್ಯಾಧಾರಿತ ರಾಜಕಾರಣ ಕುರಿತು, ಬೆಂಗಳೂರು ಅದಮ್ಯ ಚೇತನ ಫೌಂಡೇಷನ್‌ನ ತೇಜಸ್ವಿನಿ ಅನಂತಕುಮಾರ್ ಅವರು ಪರಿಸರ ಪ್ರಜ್ಞೆಯೇ ಸಮಾಜ ಸೇವೆ ಕುರಿತು ಹಾಗೂ ಕಿರ್ಲೋಸ್ಕರ್ ಫೆರುಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮ್ಯಾನೇಜ್‌ಮೆಂಟ್ ಆಂಡ್ ಟೆಕ್ನಿಕಲ್ ಅಡ್ವೈಜರ್ ಬಿ.ಎಸ್.ಗೋವಿಂದ್ ಅವರು ಸಾಧನೆಗೊಂದು ಗುರಿ ವಿಷಯ ಕುರಿತು ವಿಚಾರ ಗೋಷ್ಟಿ ನಡೆಸಿಕೊಡಲಿದ್ದಾರೆ. ವಿಚಾರಗೋಷ್ಟಿಯ ಅಧ್ಯಕ್ಷತೆಯನ್ನು ಬೆಂಗಳೂರು ರಮಣಶ್ರೀ ಫೌಂಡೇಷನ್‌ನ ಅಧ್ಯಕ್ಷರಾದ ನಾಡೋಜ ಎಸ್.ಷಡಕ್ಷರಿ ಅವರು ವಹಿಸಲಿದ್ದಾರೆ.
ವಿವಿಧ ಕ್ಷೇತ್ರಗಳ ಆಯ್ದ ಯುವಕರೊಂದಿಗೆ ರುದ್ರೇಗೌಡರ ಬದುಕು-ಸಾಧನೆ ಕುರಿತು “ಅಂತರಂಗ-ಬಹಿರಂಗ” ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅವರ ಬೆಳವಣಿಗೆ, ಕಷ್ಟಗಳನ್ನು ಅವಕಾಶಗಳನ್ನಾಗಿಸಿಕೊಂಡು ಸಾಧಿಸಿದ ರೀತಿ, ಉದ್ಯಮಗಳನ್ನು ಕಟ್ಟಿದ ಶ್ರಮ, ಎಲ್ಲರನ್ನೂ ಜೊತೆಯಾಗಿ ಬೆಳೆಸಿದ ಪರಿ, ಈ ಎಲ್ಲ ವಿಚಾರಗಳನ್ನೂ ಅವರೊಂದಿಗಿನ ಆತ್ಮೀಯ ಸಂವಾದದಲ್ಲಿ ಅವರ ಪುತ್ರಿ ಚೈತ್ರ ಅರುಣ್ ನಿರ್ವಹಿಸಲಿದ್ದಾರೆ.
ಅಭಿನಂದನಾ ಸಮಾರಂಭ
ಸುಪ್ರೀಂಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಗೌರವ ಸಮರ್ಪಣೆ ಮಾಡುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಗೌಡರ ಬದುಕು-ಸಾಧನೆ ಕುರಿತ ‘ಎಸ್. ರುದ್ರೇಗೌಡ-ದಿ ಐರನ್ ಮ್ಯಾನ್ʼ ಪುಸ್ತಕವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್ ಶಂಕರ್ ಅವರು ಗೌಡರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಎಸ್.ರುದ್ರೇಗೌಡರ ಕುರಿತ ಕಿರುಚಿತ್ರ ಕೂಡ ಲೋಕಾರ್ಪಣೆಗೊಳ್ಳಲಿದೆ.
ಇದನ್ನೂ ಓದಿ – ಶಿವಮೊಗ್ಗದ ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಶುರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200