ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ನಡೆಯಲಿದೆ. ಈ ಹಿನ್ನಲೆ ನಗರದಾದ್ಯಂತ ಹಿಂದೂ ಕೇಸರಿ (Saffron) ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಮಾಡಲಾಗುತ್ತಿದೆ. ಸದ್ಯಕ್ಕೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಹೇಗಿದೆ ಅಲಂಕಾರ?
ಗಾಂಧಿ ಬಜಾರ್: ಪ್ರವೇಶ ದ್ವಾರದಲ್ಲಿ ಸಮುದ್ರ ಮಂಥದ ಕತೆ ಆಧಾರಿತವಾಗಿ ಮಹಾದ್ವಾರ ನಿರ್ಮಿಸಲಾಗಿದೆ. ಗಾಂಧಿ ಬಜಾರ್ ಮುಖ್ಯರಸ್ತೆಗೆ ಕೇಸರಿ ಬಂಟಿಂಗ್ಸ್ ಹಾಕಲಾಗಿದೆ.
ಇದನ್ನೂ ಓದಿ » ಗಾಂಧಿ ಬಜಾರ್ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್ ಏನು?
ಬಿ.ಹೆಚ್.ರಸ್ತೆ: ಡಿವೈಡರ್‌ಗಳ ಮೇಲೆ ಹಿಂದೂ ದೇವರು, ಧಾರ್ಮಿಕ ಗುರುಗಳ ಭಾವಚಿತ್ರದ ಫ್ಲೆಕ್ಸ್ ಅಳವಡಿಸಲಾಗಿದೆ. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಧರ್ಮಸ್ಥಳ ಮಾದರಿಯ ಮಹಾದ್ವಾರ ನಿರ್ಮಿಸಲಾಗಿದೆ. ವಿವಿಧೆಡೆ ಲೈಟಿಂಗ್ ಹಾಕಲಾಗಿದೆ.

ಇದನ್ನೂ ಓದಿ » ಯಡಿಯೂರಪ್ಪ ಲಕ್ಕಿ ಕಾರಿನಲ್ಲಿ ವಿಜಯೇಂದ್ರ ರೌಂಡ್ಸ್, ಅಪ್ಪನ ಏಟು, ಅಪಘಾತದ ಬಗ್ಗೆ ಮಾತು, ಏನೆಲ್ಲ ನೆನಪಿಸಿಕೊಂಡರು?
ನೆಹರು ರಸ್ತೆ: ಇಡೀ ರಸ್ತೆಗೆ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು, ನೆಹರು ರಸ್ತೆಯ ಪ್ರವೇಶದಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಹಾದ್ವಾರ ನಿರ್ಮಿಸಲಾಗಿದೆ.
ವಿದ್ಯಾನಗರ: ಬಿ.ಹೆಚ್.ರಸ್ತೆಯಲ್ಲಿ ಡಿವೈಡರ್ ಮೇಲೆ ಕೇಸರಿ ಧ್ವಜಗಳನ್ನು ಹಾಕಲಾಗಿದೆ. ಎಂಆರ್‌ಎಸ್ ಸರ್ಕಲ್‌ನಲ್ಲಿ ಕೇಸರಿ ಬಂಟಿಂಗ್ಸ್‌ನಿಂದ ಅಲಂಕಾರ ಮಾಡಲಾಗಿದೆ. ಸರ್ಕಲ್‌ನಲ್ಲಿ ಶಿವಾಜಿ ಮಹಾರಾಜ ಮತ್ತು ಶ್ರೀರಾಮನ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ.







saffron decoration in Shimoga city
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






