ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಿಟಿಯಲ್ಲಿ ಗಣೇಶ ಚತುರ್ಥಿಗೆ ಅದ್ಧೂರಿ ಸಿದ್ಧತೆ ನಡೆಯುತ್ತಿದೆ. ನಗರದ ವಿವಿಧೆಡೆ ಗಣಪತಿಯ ಪೆಂಡಾಲ್ ರೆಡಿ ಮಾಡಲಾಗಿದೆ. ಕೆಲವು ಕಡೆ ಕೇಸರಿ (Saffron Flags) ಧ್ವಜ, ಬಂಟಿಂಗ್ಸ್ಗಳನ್ನು ಹಾಕಲಾಗಿದೆ.
ಗಣೇಶ ಚತುರ್ಥಿಗೆ ನಗರದಾದ್ಯಂತ ಅದ್ಧೂರಿ ಸಿದ್ಧತೆ ನಡೆಯುತ್ತಿದೆ. ಪ್ರತಿ ಬಡಾವಣೆಯಲ್ಲಿಯು ಸಾರ್ವಜನಿಕವಾಗಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಈಗಾಗಲೆ ಪೆಂಡಾಲ್ಗಳನ್ನು ನಿರ್ಮಿಸಲಾಗಿದ್ದು, ಅಲಂಕಾರದ ಕೆಲಸಗಳು ನಡೆಯುತ್ತಿವೆ.

ಹಿಂದೂ ಮಹಾಸಭಾ, ಸಿದ್ಧತೆ ಜೋರು
ಕೋಟೆ ರಸ್ತೆಯ ಶ್ರೀ ಭಿಮೇಶ್ವರ ದೇವಸ್ಥಾನದ ಆವರಣದಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಇದಕ್ಕೆ ಅಂತಿಮ ಸಿದ್ಧತೆ ನಡೆಯುತ್ತಿದೆ. ದೇಗುಲದ ಒಳಾಂಗಣದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ದೇಗುಲದ ಹೊರಗೆ ಚಪ್ಪರ ಹಾಕಲಾಗಿದೆ. ಮುಖ್ಯ ರಸ್ತೆಯಲ್ಲಿ ಸ್ವಾಗತ ಕಮಾನು ನಿರ್ಮಿಸಲಾಗಿದೆ.

ಕೇಸರಿಮಯ ಶಿವಮೊಗ್ಗ ನಗರ
ಗಣೇಶೋತ್ಸವ ಹಿನ್ನೆಲೆ ಸಿಟಿಯ ಹಲವೆಡೆ ಕೇಸರಿ ಧ್ವಜ, ಬಂಟಿಂಗ್ಸ್ಗಳಿಂದ ಅಲಂಕಾರ ಮಾಡಲಾಗಿದೆ. ನಗರದ ವಿದ್ಯಾನಗರದ ಮುಖ್ಯರಸ್ತೆಯಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್ ಹಾಕಲಾಗಿದೆ. ಹಿಂದು ಕೇಸರಿ ಅಲಂಕಾರ ಸಮಿತಿ ವತಿಯಿಂದ ನಗರದ ವಿವಿಧೆಡೆ ಅಲಂಕಾರ ಮಾಡಲಾಗುತ್ತಿದ್ದು, ಪ್ರಮುಖ ವೃತ್ತಗಳಲ್ಲಿ ಸ್ವಾಗತ ಕಮಾನು ನಿರ್ಮಿಸಲಾಗುತ್ತಿದೆ.

ಇದನ್ನೂ ಓದಿ » ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಜನವೋ ಜನ, ಹೇಗಿತ್ತು ಹಬ್ಬದ ಖರೀದಿ?
Saffron flags and preparations for ganesh chaturthi
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















