ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020
ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರದ್ದು ತುಘಲಕ್ ದರ್ಬಾರ್. ಕೂಡಲೆ ಅವರು ಅಧಿಕಾರ ಬಿಟ್ಟು ಕೆಳಗಿಳಿಬೇಕು ಎಂದು ಒತ್ತಾಯಿಸಿ ತಾಲೂಕು ಪಂಚಾಯಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸರ್ವ ಪಕ್ಷದ ಸದಸ್ಯರ ಪ್ರತಿಭಟನೆ
ಪ್ರತಿಭಟನೆಯಲ್ಲಿ ಬಿಜೆಪಿಯ ಆರು ಸದಸ್ಯರು, ಕಾಂಗ್ರೆಸ್ನ ಒಬ್ಬರು, ಜೆಡಿಎಸ್ನ ಒಬ್ಬರು ಮತ್ತು ಇಬ್ಬರು ಪಕ್ಷೇತರ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಹಕ್ರೆ ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ ಎಂದರು.
‘ಅಧ್ಯಕ್ಷರದ್ದು ತುಘಲಕ್ ದರ್ಬಾರ್’
ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರದ್ದು ತುಘಲಕ್ ದರ್ಬಾರ್ ಎಂದು ಆರೋಪಿಸಿದ ಪ್ರತಿಭಟನಾಕಾರರು, ನೆರೆ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ತಾಲೂಕು ಪಂಚಾಯಿತಿಯ ಜನರೇಟರನ್ನು ತಮ್ಮ ಮನೆಗೆ ಕೊಂಡೊಯ್ದಿದ್ದಾರೆ. ಸಮಾಜಕ ಕಲ್ಯಾಣ ಇಲಾಖೆ ನೌಕರರೊಬ್ಬರನ್ನು ತಮ್ಮ ಫೋಟೊ ತೆಗೆಯಲು ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಶಾಸಕರ ಹಸ್ತಕ್ಷೇಪವಿಲ್ಲ, ಸಭೆಗೆ ಬರಲ್ಲ
ಅಧ್ಯಕ್ಷರ ವಿರುದ್ಧ ತಮ್ಮ ಹೋರಾಟಕ್ಕೆ ಶಾಸಕ ಹರತಾಳು ಹಾಲಪ್ಪ ಕೈವಾಡವಿದೆ ಎಂದು ಆರೋಪಿಸಲಾಗುತ್ತಿದೆ. ಆದರೆ ಶಾಸಕರಿಗೂ ನಮ್ಮ ಹೋರಾಟಕ್ಕೂ ಸಂಬಂಧವಿಲ್ಲ. ಎಲ್ಲ ಪಕ್ಷದವರು ಸ್ವಂತ ಅಭಿಪ್ರಾಯದಿಂದ ಈ ಹೋರಾಟದಲ್ಲಿ ತೊಡಗಿದ್ದೇವೆ. ತಾಲೂಕು ಪಂಚಾಯಿತಿ ಸಭೆ ನಡೆಸುವಂತೆ ಕಾರ್ಯನಿರ್ವಾಹಣಾಧಿಕಾರಿ ಮೇಲೆ ಒತ್ತಡ ಹೇರಲಾಗುತ್ತಿದೆ. ಆದರೆ ಅಧ್ಯಕ್ಷರನ್ನು ಕೆಳಗಿಳಿಸುವವರೆಗೆ ಯಾವುದೆ ಸಭೆಗೂ ತಾವು ಹೋಗುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದರು.
ಅಧ್ಯಕ್ಷರ ಅಧಿಕಾರ ದರ್ಪದ ವಿರುದ್ಧ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ತಾಲೂಕು ಪಂಚಾಯಿತಿ ಸದಸ್ಯರು ದೂರು ನೀಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]