ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷ, ಸಂತೆಕಡೂರಿನ ಆರ್. ವಿಜಯ ಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ನವೆಂಬರ್ 14 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಕರ್ನಾಟಕ ರಾಜ್ಯ ಸಹಕಾರ ಚಳವಳಿಯ ಬೆಳವಣಿಗೆಗೆ ಅವರು ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ತಿಳಿಸಿದೆ. ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ವಿಜಯ ಕುಮಾರ್ ಅವರಿಗೆ ರಾಜ್ಯ ಮಟ್ಟದ ಗೌರವ ಒಲಿದಿರುವುದಕ್ಕೆ ಜಿಲ್ಲೆಯ ಸಹಕಾರಿಗಳು, ಅವರ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
