ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ರಸ್ತೆ ತಡೆ, ಮಾತು ತಪ್ಪಿದ ವಿವಿ ಆಡಳಿತದ ವಿರುದ್ಧ ಗರಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 NOVEMBER 2023

SHIMOGA : ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಕೊಟ್ಟ ಮಾತು ತಪ್ಪಿದ್ದಾರೆ. ಇದರಿಂದ ತರಗತಿಗಳು ನಡೆಯದೆ ತಮ್ಮ ಶೈಕ್ಷಣಿಕ ಪ್ರಗತಿಗೆ ತೊಡಕಾಗುತ್ತಿದೆ ಎಂದು ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟಿಸಿದರು. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್‌.ರಸ್ತೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿ ಕುವೆಂಪು ವಿವಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿ.ಹೆಚ್‌.ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌

ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದ್ದರಿಂದ ಬಿ.ಹೆಚ್.ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಕೆಲವೆ ಕ್ಷಣದಲ್ಲಿ ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತವು. ರಸ್ತೆ ತಡೆ ನಡೆಸದಂತೆ ಪೊಲೀಸರು ಮನವೊಲಿಸಿದ್ದರಿಂದ ವಿದ್ಯಾರ್ಥಿಗಳು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ – ಕುವೆಂಪು ವಿವಿಯಲ್ಲಿ ಕೌನ್ಸೆಲಿಂಗ್‌, ಮೊದಲ ದಿನ ಶೇ.85ರಷ್ಟು ಮೆರಿಟ್‌ ಸೀಟ್‌ ಭರ್ತಿ, ಹೇಗಿತ್ತು ವ್ಯವಸ್ಥೆ?

ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು?

ಸೆಪ್ಟಂಬರ್‌ನಲ್ಲಿ ಶೈಕ್ಷಣಿಕ ವರ್ಷ ಆರಂಭವಾದರು ತರಗತಿಗಳು ನಡೆಯುತ್ತಿಲ್ಲ. ಅತಿಥಿ ಉಪನ್ಯಾಸಕರನ್ನು ನೇಮಿಸದೆ ಇರುವುದೆ ಇದಕ್ಕೆ ಕಾರಣ. ಈ ಬಗ್ಗೆ ಆರಂಭದಲ್ಲಿ ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಅಧ್ಯಾಪಕರು ಮೌಲ್ಯಮಾಪನ ಕಾರ್ಯಕ್ಕೆ ತೆರಳಿದ್ದಾರೆ. ದಸರಾ, ದೀಪಾವಳಿ ಹಬ್ಬದ ನಂತರ ತರಗತಿ ಪ್ರಾರಂಭಿಸಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದರು. ಆದರೆ ಈಗ ಅತಿಥಿ ಉಪನ್ಯಾಸಕರ ನೇಮಕವಾದ ನಂತರ ತರಗತಿ ಪ್ರಾರಂಭವಾಗುತ್ತವೆ ಎನ್ನುತ್ತಿದ್ದಾರೆ. ಇದರಿಂದ ಅಧ್ಯಯನದಲ್ಲಿ ಹಿಂದುಳಿಯುವ ಭಯ ಕಾಡುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

Sahyadri College Students Protest

ಮಾತು ತಪ್ಪಿದ ವಿವಿ ಆಡಳಿತ

ಕೆಲವು ಅತಿಥಿ ಉಪನ್ಯಾಸಕರು ಮಾನವೀಯ ಹಿನ್ನೆಲೆಯಲ್ಲಿ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು. ಆದರೆ ಈಗ ಅವರೂ ನಮಗೆ ನೇಮಕಾತಿ ಆದೇಶ ದೊರೆತಿಲ್ಲ. ಪ್ರಾಂಶುಪಾಲರನ್ನು ಕೇಳಿ ಎನ್ನುತ್ತಿದ್ದಾರೆ. ಖಾಯಂ ಅಧ್ಯಾಪಕರು ಮೌಲ್ಯಮಾಪನಕ್ಕೆ ಹೋಗಿದ್ದೆವು ಎನ್ನುತ್ತಾರೆ. ಕಳೆದ ವಾರ ಇದೆ ವಿಚಾರವಾಗಿ ಪ್ರತಿಭಟನೆ ನಡೆಸಲಾಗಿತ್ತು. ಆಗ ಶನಿವಾರದ ಒಳಗೆ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತದೆ ಎಂದು ಕುವೆಂಪು ವಿವಿ ಆಡಳಿತ ಭರವಸೆ ನೀಡಿತ್ತು. ಈಗ ಮಾತು ತಪ್ಪಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

Sahyadri College Students Protest

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment