ಶಿವಮೊಗ್ಗ : ಕುವೆಂಪು ರಂಗಮಂದಿರದಲ್ಲಿ ಸಂತ (Saint) ಶ್ರೀ ಸೇವಾಲಾಲ್ ಜಯಂತಿಯ ಕಾರ್ಯಕ್ರಮವನ್ನು ಶಾಸಕ ಎಸ್.ಎನ್.ಚನಬಸಪ್ಪ ಉದ್ಘಾಟಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಬಂಜಾರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂತ ಸೇವಾಲಾಲರು ಸತ್ಯ, ನಿಷ್ಟೆ ಪ್ರಾಮಾಣಿಕತೆಗೆ ಹೆಸರಾದವರು. ಬಂಜಾರ ಸಮಾಜದ ಉದ್ಧಾರಕರು. ಬಂಜಾರ ಸಮಾಜ ಮುಂದುವರೆಯಲು, ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಕರಿಸುತ್ತಿದೆ. ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಮುಂದೆ ಬರಬೇಕು.
ಎಸ್.ಎನ್.ಚನ್ನಬಸಪ್ಪ, ಶಾಸಕ
ಸಂತ ಸೇವಾಲಾಲರಂತಹ ದಾರ್ಶನಿಕರು ಒಂದು ಜಾತಿಗೆ ಸೀಮಿತರಲ್ಲ. ಅವರು ಬಂಜಾರ ಸಮಾಜದ ಸುಧಾರಣೆ ಮತ್ತು ಅಭಿವೃದ್ಧಿಗಾಗಿ ಬಹಳಷ್ಟು ಉತ್ತಮ ಸಂದೇಶ ನೀಡಿದ್ದಾರೆ. ಆದರೆ ಸಂತರು, ಶರಣರು ಸಾಗಿ ಬಂದ ಹಾದಿ ಸುಗಮವಾಗಿರಲಿಲ್ಲ. ಇವರ ವಚನ, ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಕಾಂತಾ ನಾಯಕ್, ರಾಜ್ಯ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷೆ
ನಾವೆಲ್ಲಾ ಸಹೋದರರಂತೆ ಬಾಳಬೇಕು ಎನ್ನುವ ಪರಿಕಲ್ಪನೆಯನ್ನು ಸಂತ ಸೇವಾಲಾಲ್ ಈ ಸಮಾಜಕ್ಕೆ ಕೊಟ್ಟಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿನ ಅನೇಕ ವಿಷಯಗಳನ್ನು ಸಂತ ಸೇವಾಲಾಲರು ಬಹಳ ಮುಂಚೆಯೇ ಸಮುದಾಯಕ್ಕೆ ನೀಡಿದ್ದರು. ಅಹಿಂಸೆಯಿಂದ ಮಾತ್ರ ಸಮಾಜ ಕಟ್ಟಲು ಸಾಧ್ಯ ಎಂದು 270 ವರ್ಷಗಳ ಹಿಂದೆಯೇ ತಿಳಿಸಿದ್ದರು.
ಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯ
ಸ್ವಾಭಿಮಾನ, ಭಕ್ತಿ, ತ್ಯಾಗ ಹಾಗೂ ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಬಂಜಾರ ಸಮುದಾಯ. ಬಂಜಾರ ಸಮುದಾಯಕ್ಕೆ ವಿಶೇಷವಾದ ಇತಿಹಾಸ ಇದೆ. ತಿರುಪತಿ ತಿಮ್ಮಪ್ಪನಿಗೆ ಈ ಸಮಾಜದ ಗುರುವಿನಿಂದಲೇ ಮೊದಲ ಪೂಜೆ ನಡೆಯುವುದು. ಈ ದೇಶದ ಸಂಸತ್ ಭವನ ಕಟ್ಟಲು ಜಾಗ ಕೊಟ್ಟಿದ್ದು ಕೂಡ ಇದೇ ಸಮಾಜ. ಹಾಗಾಗಿ ಇದನ್ನು ಲಾಯಲ್ ಕಮ್ಯುನಿಟಿ ಇನ್ ಇಂಡಿಯಾ ಎನ್ನಲಾಗುತ್ತದೆ. ಬಂಜಾರ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಹಾಗೂ ಪ್ರಾತಿನಿಧ್ಯತೆಯನ್ನು ಸಂತ ಸೇವಾಲಾಲರು ನೀಡಿದ್ದಾರೆ.
ಕೆ.ಬಿ.ಅಶೋಕ್ ನಾಯ್ಕ್, ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್. ಚಂದ್ರಭೂಪಾಲ, ಜಿಲ್ಲಾ ಬಂಜಾರ ಸಂಘದ ಉಪಾಧ್ಯಕ್ಷ ಆರ್.ಜಗದೀಶ್, ಕಾರ್ಯದರ್ಶಿ ಕೆ.ಆನಂದ್, ತಾಲ್ಲೂಕು ಬಂಜಾರ ಸಂಘ ಅಧ್ಯಕ್ಷ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಚ್ಚುವರಿ ರಕ್ಷಣಾಧಿಕಾರಿ ಕಾರ್ಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಶಿವಮೊಗ್ಗದಿಂದ ಕುಂಭಮೇಳಕ್ಕೆ ವಿಶೇಷ ರೈಲು, ಟಿಕೆಟ್ ಬುಕಿಂಗ್ ಶುರು, ಯಾವಾಗ ಹೊರಡುತ್ತೆ ರೈಲು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200