ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 OCTOBER 2023
SHIMOGA : ದಸರಾ ಮಹೋತ್ಸವಕ್ಕೆ ಸಕ್ರೆಬೈಲು ಬಿಡಾರದಿಂದ ಮೂರು ಆನೆಗಳು (Elephants) ನಗರಕ್ಕೆ ಆಗಮಿಸಿವೆ. ಮಹಾನಗರ ಪಾಲಿಕೆ ವತಿಯಿಂದ ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು.
ಅಂಬಾರಿ ಹೊರಲಿರುವ ಸಾಗರ್ ಆನೆ, ಕುಮ್ಕಿ ಆನೆಗಳಾದ ನೇತ್ರಾವತಿ ಮತ್ತು ಹೇಮಾವತಿ ನಗರಕ್ಕೆ ಆಗಮಿಸಿವೆ. ಶುಕ್ರವಾರ ಸಂಜೆ ಮಹಾನಗರ ಪಾಲಿಕೆ ಸದಸ್ಯರು ಆನೆಗಳಿಗೆ ಪೂಜೆ ಸಲ್ಲಿಸಿ, ಸ್ವಾಗತಿಸಿದರು. ಕೋಟೆ ರಸ್ತೆಯಲ್ಲಿರುವ ವಾಸವಿ ಶಾಲೆಯಲ್ಲಿ ಆನೆಗಳು ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಇನ್ನು, ಆನೆಗಳು ಬಂದಿರುವ ವಿಚಾರ ತಿಳಿದು ಜನ ವಾಸವಿ ಶಾಲೆಯತ್ತ ಧಾವಿಸುತ್ತಿದ್ದಾರೆ. ಆನೆಗಳ ಫೋಟೊ ಕ್ಲಿಕ್ಕಿಸಿ ಸಂಭ್ರಮಿಸುತ್ತಿದ್ದಾರೆ.
ತಾಲೀಮು ಆರಂಭಿಸಿದ ಆನೆಗಳು
ನಗರಕ್ಕೆ ಆಗಮಿಸುತ್ತಿದ್ದಂತೆ ಆನೆಗಳು ತಾಲೀಮು ಆರಂಭಿಸಿವೆ. ಕೋಟೆ ರಸ್ತೆಯಿಂದ ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ಆನೆಗಳನ್ನು ಇಂದು ಬೆಳಗ್ಗೆ ಕರೆದೊಯ್ಯಲಾಯಿತು. ನಗರದ ವಾಹನ ದಟ್ಟಣೆ, ಕಟ್ಟಡಗಳು ಮತ್ತು ಇಲ್ಲಿಯ ಪರಿಸರಕ್ಕೆ ಆನೆಗಳು ಹೊಂದಿಕೊಳ್ಳಬೇಕಿದೆ. ಈ ಹಿನ್ನೆಲೆ ತಾಲೀಮು ಪ್ರಮುಖವಾಗುತ್ತದೆ. ಸಕ್ರೆಬೈಲು ಬಿಡಾರದ ಸಿಬ್ಬಂದಿಗಳು ತಾಲೀಮಿನಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಸಕ್ರೆಬೈಲು ಆನೆ ಬಿಡಾರ, ಮಾವುತ, ಕಾವಾಡಿಗಳ ಜೊತೆ ವೈಲ್ಡ್ ಟಸ್ಕರ್ ದಸರಾ ಸಂಭ್ರಮ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















