ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಮನ್ವಯ ಸಂಸ್ಥೆಯ 20ನೇ ವರ್ಷದ ಸಂಭ್ರಮದ ಹಿನ್ನೆಲೆ ಜುಲೈ 19ರಿಂದ ಮೂರು ದಿನ ಸಮನ್ವಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ‘ಸಮನ್ವಯ ಸಂಗಮ’ ಕಾರ್ಯಕ್ರಮ (Programme) ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಸಮನ್ವಯ ಕಾಶಿ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮನ್ವಯ ಕಾಶಿ, ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9.45ರಿಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಭರವಸೆಯ ಹೆಜ್ಜೆ’ ಎಂಬ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಾಗಾರವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಗೃಹಮಂಡಳಿ ಆಯುಕ್ತ ಕೆ.ಎ.ದಯಾನಂದ್ ಉದ್ಘಾಟಿಸುವರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಎಸಿ ಜಿ.ಎಚ್.ಸತ್ಯನಾರಾಯಣ, ಅಮೃತ್ ನೋನಿ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀನಿವಾಸಮೂರ್ತಿ, ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಯ ನಿರ್ದೇಶಕಿ ಡಾ. ರಜನಿ ಪೈ, ಡಿಡಿಪಿಯು ಚಂದ್ರಪ್ಪ ಎಸ್.ಗುಂಡಪಲ್ಲಿ ಉಪಸ್ಥಿತರಿರುವರು ಎಂದರು.

ಜು.20, 21ರಂದು ಏನೆಲ್ಲ ಕಾರ್ಯಕ್ರಮ?
ಜುಲೈ 20ರಂದು ಸಂಜೆ 5.30ರಿಂದ ಸಮನ್ವಯ ಸಂಗಮ, ಗಾನ-ಸನ್ಮಾನ-ಸತ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆ.ಎ.ದಯಾನಂದ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಉಚಿತ ವಾಚನಾಲಯದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೋಮಿನಕೊಪ್ಪ ರಸ್ತೆಯ ಆರ್ಯವೈಶ್ಯ ಸಮುದಾಯ ಭವನದಲ್ಲಿ ಜುಲೈ 21ರಂದು ಸಂಜೆ 6ಕ್ಕೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ಅರ್ಜುನ ಅವಧೂತ ಮಹಾರಾಜರು, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಿರಾಳಕೊಪ್ಪದ ಶಿವನಾಗ ಪಾರ್ಥ ಅವಧೂತರು ಉಪಸ್ಥಿತರಿರುವರು.

ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇಗೆ ನೊಟೀಸ್, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ?
ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಅಬ್ದುಲ್ ಮುಜೀಬ್, ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಕೆ.ಎಂ.ಗಿರಿಜಾದೇವಿ, ಆರ್.ಜಿ.ಎಸ್ ಸಂಸ್ಥೆಯ ಅಧ್ಯಕ್ಷ ಗಣೇಶ್ ಪಾಲ್ಗೊಳ್ಳುವರು.
ಸುದ್ದಿಗೋಷ್ಠಿಯಲ್ಲಿ ನಂದಿನಿ, ಸ್ಮಿತಾ, ಯತೀಶ್, ವಿಜಯಕುಮಾರ್, ಗುಂಡಣ್ಣ (ಗಣೇಶ್), ಚಿರು, ಶಾಹೀದ್, ಸಂತೋಷ್ ಇದ್ದರು.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















