ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 17 ಜನವರಿ 2020
ಸಂಸ್ಕೃತಕ್ಕೆ ಹಲವು ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಇದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ವಾಸಗುರು ಶ್ರೀ ವಚನಾನಂದ ಮಹಾಸ್ವಾಮೀಜಿ ಹೇಳಿದ್ದಾರೆ.
ಶಿವಮೊಗ್ಗದ ಶುಭಮಂಗಳ ಕಲ್ಯಾಣ ಮಂದಿರದ ಆವರಣದಲ್ಲಿ ಶ್ರೀಗಂಧ ಸಂಸ್ಥೆ, ವಾಸವಿ ಸಂಸ್ಕೃತ ಅಧ್ಯಯನ ಕೇಂದ್ರ, ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಂಸ್ಕೃತ ಬಾಲ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ವಚನಾನಂದ ಸ್ವಾಮೀಜಿ ಅವರು, ಸಂಸ್ಕೃತ ಅಕ್ಷರಗಳು ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಹೊಂದಿದೆ ಎಂದರು.
ಭಾರತದ ಕಲೆ, ಸಂಸ್ಕೃತಿ, ಇತಿಹಾಸ ಎಲ್ಲವು ಸಂಸ್ಕೃತದಲ್ಲಿದೆ. ಹಾಗಾಗಿ ಈ ದೇಶದ ಸಂಸ್ಕೃತಿ ತಿಳಿಯಬೇಕಿದ್ದರೆ ಸಂಸ್ಕೃತದ ಅರಿವು ಮುಖ್ಯ ಎಂದು ಸ್ವಾಮೀಜಿ ತಿಳಿಸಿದರು.
ಸಂಸ್ಕೃತ ಕಲಿತವರು ಸುಸಂಸ್ಕೃತರು
ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಎಲ್ಲರು ಸಂಸ್ಕೃತ ಕಲಿಯಬೇಕು. ಯಾಕೆಂದರೆ ಸಂಸ್ಕೃತ ಕಲಿತವರು ಸುಸಂಸ್ಕೃತರಾಗುತ್ತಾರೆ. ಒಳ್ಳೆಯ ವಿಚಾರಗಳನ್ನು ಕಲಿಸುವ ಭಾಷೆ ಈ ಸಂಸ್ಕೃತ. ಇದನ್ನು ಕಲಿತು ಎಲ್ಲರು ಸುಸಂಸ್ಕೃತರಾಗೋಣ ಎಂದರು.
ಸಂಸ್ಕೃತ ಭಾರತಿ ಸಂಸ್ಥೆಯ ರಾಷ್ಟ್ರೀಯ ಸಂಘಟನಾ ಮಂತ್ರಿ ದಿನೇಶ್ ಕಾಮತ್ ಅವರು ಉಪಸ್ಥಿತರಿದ್ದರು.
ಉದ್ಘಾಟನೆ ಬಳಿಕ ದೇಶದ ವಿದೇಶಗಳಲ್ಲಿ ಸಂಸ್ಕೃತ ಕಾರ್ಯ ಕುರಿತು ದಿನೇಶ್ ಕಾಮತ್ ಅವರು ಸಂವಾದ ನಡೆಸಿದರು. ವಿವಿಧ ಶಾಲೆಯ ಮಕ್ಕಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422