ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020

ಜಿಲ್ಲೆಯಲ್ಲಿ ಮಾನ್ಸೂನ್ ಮುಗಿಯುವ ತನಕ ಮರಳುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮರಳು ಗಣಿಗಾರಿಕೆಯನ್ನು ಜೂನ್ 6ರಿಂದ ಮಾನ್ಸೂನ್ ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ಟಾಕ್‍ಯಾರ್ಡ್‍ಗಳಲ್ಲಿರುವ ಮರಳನ್ನು ನಿಗದಿತ ಕಾಲಮಿತಿಯ ಒಳಗಾಗಿ ಸಾಗಾಣಿಕೆ ಮಾಡಲು ಅವಕಾಶ ನೀಡಲಾಗುವುದು ಎಂದರು.
ಮಾನ್ಸೂನ್ ಅವಧಿಯಲ್ಲಿ ಮರಳುಗಾರಿಕೆಯಿಲ್ಲ
ಮಾನ್ಸೂನ್ ಅವಧಿಯಲ್ಲಿ ಮರಳುಗಾರಿಕೆಯನ್ನು ಯಾವುದೇ ಕಾರಣಕ್ಕೂ ನಡೆಯಲು ಅವಕಾಶ ನೀಡಬಾರದು. ತಾಲೂಕು ಮಟ್ಟದ ಸಮಿತಿಯು ಇದಕ್ಕೆ ಜವಾಬ್ದಾರಿಯಾಗಿರುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ತಪಾಸಣೆ ತೀವ್ರಗೊಳಿಸಿ
ಪ್ರಸಕ್ತ ಸಾಲಿನಲ್ಲಿ ಮೇ ಅಂತ್ಯದ ವರೆಗೆ ಅಕ್ರಮ ಮರಳು ಸಾಗಾಣಿಕೆ ಸಂಬಂಧ 16 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, 1.48ಲಕ್ಷ ರೂ. ದಂಡ ವಸೂಲು ಮಾಡಲಾಗಿದೆ. ಮರಳು ಸಾಗಾಣಿಕೆಯಿಂದ 24.23 ಲಕ್ಷ ರೂ. ರಾಜಧನ ಸಂಗ್ರಹಿಸಲಾಗಿದೆ. ಹೆಚ್ಚುವರಿ ನಿಯತಕಾಲಿಕ ಪಾವತಿ ಮೊತ್ತ ರೂ.2.61 ಕೋಟಿ ರೂ. ಸಂಗ್ರಹಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆಯಿಂದ 8 ಲಕ್ಷ ರೂ. ರಾಜಧನ ದಂಡ ಪಡೆಯಲಾಗಿದೆ. ಕಟ್ಟಡ ಕಲ್ಲುಗಣಿಗಾರಿಕೆಯಿಂದ 8.78 ಲಕ್ಷ ರೂ. ರಾಜಧನ ಪಡೆಯಲಾಗಿದ್ದು, ಕಟ್ಟಡ ಕಲ್ಲು ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆಯಿಂದ 3.96ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಶ್ಮಿ ಮಾಹಿತಿ ನೀಡಿದರು.
ಸರ್ಕಾರಿ ಆಸ್ತಿ ಕಳ್ಳತನ ಮೊಕದ್ದಮೆ
ಅನಧಿಕೃತವಾಗಿ ಮರಳುಗಾರಿಕೆ, ಅಕ್ರಮ ಗಣಿಗಾರಿಕೆಯನ್ನು ತಡೆಯಲು ತಪಾಸಣೆಯನ್ನು ತೀವ್ರಗೊಳಿಸಬೇಕು ಮತ್ತು ಸರ್ಕಾರಿ ಆಸ್ತಿ ಕಳ್ಳತನದ ಮೊಕದ್ದಮೆಯನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಳ್ಳಕೊಳ್ಳದಿಂದ ಮರಳು ತೆಗೆಯಲು ಬ್ಲಾಕ್ ಗುರುತಿಸುವ ಕುರಿತು ತಾಲೂಕು ಮಟ್ಟದ ಸಮಿತಿಯಿಂದ ಶಿಫಾರಸು ಬಂದರೆ ಜಿಲ್ಲಾ ಮಟ್ಟದ ಟಾಸ್ಕ್‍ಫೋರ್ಸ್ ಸಮಿತಿ ಪರಿಶೀಲಿಸಿ ಅಧಿಸೂಚನೆ ಹೊರಡಿಸಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಯೋಜನಾ ನಿರ್ದೇಶಕ ವೀರಾಪುರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200