ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಅಧಿಕಾರಿಗಳ ಮನೆ ಪಕ್ಕದಲ್ಲಿದ್ದ ಶ್ರೀಗಂಧದ (Sandalwood) ಮರ ಕಡಿದು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಇದೇ ವೇಳೆ ಬೈಕುಗಳಲ್ಲಿ ಪೆಟ್ರೋಲ್ ಕೂಡ ಕಳುವಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ನಗರದ ಬಸವನಗುಡಿಯ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಕಾಂಪೌಂಡ್‌ನಲ್ಲಿದ್ದ ಎರಡು ಶ್ರೀಗಂಧದ ಮರಕ್ಕೆ ಕಳ್ಳರು ಕೊಡಲಿ ಹಾಕಿದ್ದಾರೆ. ಒಂದು ಮರವನ್ನು ಕದ್ದೊಯ್ದಿದ್ದು ಮತ್ತೊಂದು ಮರಕ್ಕೆ ಕೊಡಲಿ ಏಟು ಬಿದ್ದಿದೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಇದೆ.
ಇದೆ ವೇಳೆ ವಸತಿ ಗೃಹದ ಬಳಿ ನಿಲ್ಲಿಸಿದ್ದ ಬೈಕುಗಳಲ್ಲಿ ಪೆಟ್ರೋಲ್ ಕಳವು ಮಾಡಲಾಗಿದೆ. ಒಂದು ಸೈಕಲ್, ನೀರಿನ ಪೈಪ್‌ಗಳನ್ನು ಕೂಡ ಕಳ್ಳರು ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಶ್ರೀಗಂಧದ ಮರ ಕಳ್ಳತನ ಆಗಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ಕಳೆದ ಶುಕ್ರವಾರ ಜಯನಗರ ಬಡಾವಣೆಯ ಮನೆಯೊಂದರ ಮುಂದೆ ಇದ್ದ ಶ್ರೀಗಂಧದ ಮರಕ್ಕೆ ಕೊಡಲಿ ಹಾಕಲಾಗಿತ್ತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿ ಮನೆಯಲ್ಲಿ ಪರಿಶೀಲನೆ






