ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020
ಶಿವಮೊಗ್ಗ ಉಸ್ತುವಾರಿ ಸಚಿವರ ಕಚೇರಿಗೇ ಕರೋನ ಬಿಸಿ ತಟ್ಟಿದೆ. ಸ್ಯಾನಿಟೈಸರ್ ಮಾಡಿ ಎರಡು ದಿನ ಕಚೇರಿಯನ್ನು ಬಂದ್ ಮಾಡಲಾಗಿದೆ.
ಅದೇ ಕಟ್ಟದಲ್ಲಿರುವ ಸ್ಮಾರ್ಟ್ ಸಿಟಿ ಆಫೀಸ್, ಶಿವಮೊಗ್ಗ ಗ್ರಾಮಾಂತರ ಶಾಸಕರ ಕಚೇರಿಯನ್ನೂ ಸ್ಯಾನಿಟೈಸ್ ಮಾಡಿ, ಬಾಗಿಲು ಹಾಕಲಾಗಿದೆ.
ಸ್ಯಾನಿಟೈಸ್ ಮಾಡಲು ಕಾರಣವೇನು?
ಸ್ಮಾರ್ಟ್ ಸಿಟಿ ಕಚೇರಿಗೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎರಡು ದಿನ ಇಡೀ ಕಾಂಪ್ಲೆಕ್ಸ್ ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಯಾರದು ಸೋಂಕಿತ ವ್ಯಕ್ತಿ?
ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ಬಂದಿದ್ದ ಕಾರ್ಮಿಕರೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರನ್ನು ಕೂಡಲೆ ಕ್ವಾರಂಟೈನ್‍ಗೆ ಒಳಪಡಿಸಿ, ಚಿಕಿತ್ಸೆ ಆರಂಭಿಸಲಾಗಿದೆ.

ಈಗ ಏನೆಲ್ಲ ಬಂದ್ ಆಗಿದೆ?
ಸ್ಮಾರ್ಟ್ ಸಿಟಿ ಕಚೇರಿ ಇರುವ ಕಾಂಪ್ಲೆಕ್ಸ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರ ಕಚೇರಿ ಇದೆ. ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಕಚೇರಿಯೂ ಇಲ್ಲಿಯೇ ಇದೆ. ಆಶ್ರಯ ಯೋಜನೆ ಸೇರಿದಂತೆ ಕಾಂಪ್ಲೆಕ್ಸ್‍ನಲ್ಲಿರುವ ಎಲ್ಲ ಕಚೇರಿಯನ್ನು ಬಂದ್ ಮಾಡಲಾಗಿದೆ.
ಇಡೀ ಕಾಂಪ್ಲೆಕ್ಸ್‍ಗೆ ಸ್ಯಾನಿಟೈಸೇಷನ್
ಕಾಂಪ್ಲೆಕ್ಸ್‍ನಲ್ಲಿರುವ ಎಲ್ಲಾ ಕಚೇರಿಗಳನ್ನೂ ಬಂದ್ ಮಾಡಲಾಗಿದೆ. ಮಹಾನಗರ ಪಾಲಿಕೆ ವತಿಯಿಂದ ಎಲ್ಲಾ ಕಚೇರಿಗೂ ಸ್ಯಾನಿಟೈಸ್ ಮಾಡಲಾಗುತ್ತಿದೆ. ಕಟ್ಟಡದ ಹೊರ ಭಾಗ, ಲಿಫ್ಟ್, ಮೆಟ್ಟಿಲುಗಳು, ಕಚೇರಿಯ ಒಳಾಂಗಣದಲ್ಲಿ ಸೇರಿದಂತೆ ಎಲ್ಲೆಡೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಎರಡು ದಿನ ನಿರಂತರ ಸ್ಯಾನಿಟೈಸ್ ಮಾಡಿ, ಕಚೇರಿಯನ್ನು ಬಂದ್ ಮಾಡಲಾಗುತ್ತದೆ. ಹಾಗಾಗಿ ಇಲ್ಲಿರುವ ಕಚೇರಿಗಳಿಗೆ ಎರಡು ದಿನ ಯಾರೊಬ್ಬರೂ ಬರುವಂತಿಲ್ಲ ಎಂದು ಸೂಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















