ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MAY 2021
ಶಿವಮೊಗ್ಗ ನಗರದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಕೇರ್ ಯೋಜನೆಯಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ 35 ವಾರ್ಡ್‌ಗಳಿಗೂ ಸ್ಯಾನಿಟೈಸರ್ ಸಿಂಪಡಣೆಗೆ ಚಾಲನೆ ನೀಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕೆ.ಬಿ.ಪ್ರಸನ್ನ ಕುಮಾರ್ ಅವರು ಸ್ಯಾನಿಟೈಸರ್ ಸಿಂಪಡಣೆಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್, ಬರಿ ರಾಜಕೀಯ ಮಾಡಲು ನಮ್ಮ ಪಕ್ಷವಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಕೊರೋನದಿಂದ ಜಾಗೃತಿಯಿಂದಿರಲು ನಗರದ 35 ವಾರ್ಡ್‍ಗಳಿಗೂ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್ ಕೇರ್ ಯೋಜನೆ ಅಡಿ ನಾಲ್ಕು ವಾಹನದ ಮೂಲಕ ಸ್ಯಾನಿಟೈಸ್ ಮಾಡಲಾಗುತ್ತಿದೆ. ಬಿ.ಹೆಚ್ ರಸ್ತೆಯ ಮಧ್ಯಭಾಗದಿಂದ ಆರಂಭವಾಗುವ ಬಡಾವಣೆಗಳಾದ ಗಾಂಧಿ ಬಜಾರ್, ಎಂಕೆಕೆ ರಸ್ತೆ, ಬೆಕ್ಕಿನ ಕಲ್ಮಠ, ಕೋಟೆ ಮೊದಲಾದ ಬಡಾವಣೆಗಳಲ್ಲಿ ಒಂದು ಕಡೆಗೆ ಸಿಂಪಡಣೆ ಮಾಡಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಕಾರ್ಪೊರೇಟರ್‍ಗಳಾದ ಯಮುನಾ ರಂಗೇಗೌಡ, ಹೆಚ್.ಸಿ.ಯೋಗೇಶ್ ಸೇರಿದಂತೆ ಹಲವರು ಇದ್ದರು.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]