ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020

ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಶಿ ಪೂಜೆ ಸಲ್ಲಿಸಿ, ಹಬ್ಬ ಆಚರಿಸಲಾಯಿತು.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ತೊಟ್ಟು ಬಂದಿದ್ದರು. ಕಾಲೇಜು ಆವರಣದಲ್ಲಿ ಸಂಕ್ರಾಂತಿ ಆಚಾರಣೆಗಾಗಿ ರಂಗೋಲಿ ಹಾಕಲಾಗಿತ್ತು. ನವಧಾನ್ಯಗಳ ರಾಶಿ ಹಾಕಿ, ವಿಶೇಷ ಪೂಜೆ ಸಲ್ಲಿಸಲಾಯಿತು.
ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕಿ ಡಾ.ಶುಭಾ ಮರವಂತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ದೂರದರ್ಶನ, ಆಕಾಶವಾಣಿಯ ನಿರೂಪಕಿ ಸುಗುಣಾ ಸತೀಶ್, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮಧು, ಒಕ್ಕಲಿಗ ಸಂಘದ ಜಿಲ್ಲಾ ಉಪಾಧ್ಯಕ್ಷ ಉಂಬ್ಳೇಬೈಲು ಮೋಹನ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]