SHIVAMOGGA LIVE NEWS | 11 JANUARY 2023
ಶಿವಮೊಗ್ಗ : ಬೆಜ್ಜವಳ್ಳಿಯ (Bejjavalli) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ (Temple) ಜ.14ರಂದು ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ಡಾ. ವಿಶ್ವಸಂತೋಷ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14ರಂದು ಮಕರ ಸಂಕ್ರಾಂತಿ ಉತ್ಸವ ನಡೆಯಲಿದೆ. ಅಂದು ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆಗಳು ನೆರವೇರಲಿವೆ ಎಂದು ತಿಳಿಸಿದರು.
ವಿವಿಧ ಪೂಜೆಗಳು
ಬೆಳಗ್ಗೆ 8.30ಕ್ಕೆ ಕದಲಿ ಮಂಟಪದಲ್ಲಿ ರಾಜಪಲ್ಲಕ್ಕಿ ಮಹಾಪೂಜೆ ನಡೆಯಲಿದೆ. ಹರಕೆ ತುಲಾಭಾರ ಸೇವೆ, ಬ್ರಹ್ಮ ಕಲಶ ಸ್ಥಾಪನೆ ಸೇರಿದಂತೆ ವಿವಿಧ ಪೂಜೆಗಳು ನಡೆಯಲಿವೆ. ಮಧ್ಯಾಹ್ನ 1.45ಕ್ಕೆ ಮಹಾಮಂಗಳಾರತಿ ನೆರವೇರಲಿದೆ. ಸಂಜೆ 6.30ಕ್ಕೆ ಜ್ಯೋತಿ ಪೂಜೆ, 7ಕ್ಕೆ ಅಡ್ಡಪಲ್ಲಕ್ಕಿ ಉತ್ಸವ, ಸಂಜೆ 7.30ಕ್ಕೆ ಪೊಲೀಸ್ ಪೂಜೆ ನೆರವೇರಲಿದೆ ಎಂದರು. (Temple)
ಧಾರ್ಮಿಕ ಕಾರ್ಯಕ್ರಮ
ಮಧ್ಯಾಹ್ನ 2 ಗಂಗೆ ಧಾರ್ಮಿಕ ಸಭೆ ನಡೆಯಲಿದೆ. ಚಿತ್ರದುರ್ಗದ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಬಸವ ಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಶ್ರೀ ಜಗದ್ಗುರು ಕುಂಚಿಟಿಗ ಮಹಾ ಸಂಸ್ಥಾನ ಮಠದ ಡಾ. ಶಾಂತವೀರ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮೂವರಿಗೆ ಪ್ರಶಸ್ತಿ
ಪ್ರತಿ ವರ್ಷದಂತೆ ಈ ಬಾರಿಯು ಶ್ರೀ ಹರಿಹರ ಪೀಠ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ಮೈಸೂರಿನ ಪ್ರೊ. ನಂಜರಾಜ ಅರಸ್, ಶಿವಮೊಗ್ಗ ಟೈಮ್ಸ್ ಪತ್ರಿಕೆ ಸಂಪಾದಕ ಚಂದ್ರಕಾಂತ್, ಮಂಗಳೂರು ಬಂಟರ ವಾಹಿನಿ ಸಂಪಾದಕ ಪ್ರದೀಪ್ ಕುಮಾರ್ ರೈ ಐಕಳ ಬಾವ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಡಾ. ಸಂತೋಷ್ ಭಾರತಿ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ – ಟಿವಿ ಮಾಧ್ಯಮಗಳಲ್ಲಿ ‘ಕಿಮ್ಮನೆ ಮನೆ ಮೇಲೆ ದಾಳಿ’ ಸುದ್ದಿ, ವಾಸ್ತವವೇನು? ಕಿಮ್ಮನೆ ರತ್ನಾಕರ್ ಫಸ್ಟ್ ರಿಯಾಕ್ಷನ್
ಎಂ.ಜಿ.ರಾಮಚಂದ್ರ ಮೂರ್ತಿ, ಮಂಜುನಾಥ್, ಶಾಂತಾ ಶೆಟ್ಟಿ, ಬಸವರಾಜು ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.