ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022
ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸುಳ್ಳು ಭಾಷಣಗಳು ಈಗ ಜನರಿಗೆ ಅರ್ಥವಾಗುತ್ತಿವೆ. ಜನರೇ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಆಗ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಗುರುತಿಸಿ ಜವಾಬ್ದಾರಿಗಳನ್ನು ನೀಡಲಾಗುವುದು ಎಂದರು.
ಇತಿಹಾಸ ತಿರುಚುವ ಯತ್ನ
ಮನುವಾದಿಗಳಿಂದ ಆರಂಭದಿಂದಲೂ ಇತಿಹಾಸವನ್ನು ತಿರುಚುವ ಯತ್ನಗಳು ನಡೆಯುತ್ತಿವೆ. ಈಗ ಬಿಜೆಪಿ ಕೂಡ ಅದನ್ನೇ ಮುಂದುವರಿಸಿದೆ. ಗಾಂಧೀಜಿ, ನೆಹರೂ ಅವರ ಬಗ್ಗೆ ತಪ್ಪು ವಿಚಾರಗಳನ್ನು ಹಬ್ಬಿಸಲಾಗುತ್ತಿದೆ. ಮನುಸ್ಮೃತಿಯನ್ನು ಹೇರುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಶ್ರಮ ಪ್ರಮುಖ ಪಾತ್ರ
ಎಂಎಲ್ಎ, ಎಂಎಲ್ಸಿ, ಎಂಪಿ ಹೀಗೆ ಯಾವುದೇ ಚುನಾವಣೆಯಲ್ಲಿ ಗೆಲ್ಲಬೇಕಾದರೂ ಕಾರ್ಯಕರ್ತರ ಶ್ರಮ ಪ್ರಮುಖ ಪಾತ್ರ ವಹಿಸುತ್ತದೆ. ಒಂದುವೇಳೆ, ಅವರನ್ನು ನಿರ್ಲಕ್ಷಿಸಿದರೆ ಮಾಜಿಯಾಗಬೇಕಾಗುತ್ತದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಮಾತ್ರ ಸಂಘಟನೆಗೆ ಆದ್ಯತೆ ನೀಡದೇ ಈ ಕೆಲಸವನ್ನು ನಿರಂತರವಾಗಿ ಮಾಡಬೇಕು. ಚುನಾಯಿತ ಪ್ರತಿನಿಧಿಗಳು ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಆದ್ಯತೆ ನೀಡಬೇಕು ಎಂದರು.
ಕಾರ್ಯಕರ್ತರು, ಮುಖಂಡರು ಮತ್ತು ಚುನಾಯಿತ ಪ್ರತಿನಿಧಿಗಳಲ್ಲಿ ಶಿಸ್ತು ಬರದಿದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ಪಕ್ಷದ ಕಾರ್ಯಕರ್ತರಿಗೆ ಘಟಪ್ರಭದಲ್ಲಿ ನಿರ್ಮಿಸಿರುವ ಕ್ಯಾಂಪಸ್’ನಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಕ್ಕಳನ್ನು ಪ್ರಚೋದಿಸುವ ಕೆಲಸ
ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಮಾತನಾಡಿ, ಹಿಜಾಬ್- ಕೇಸರಿ ಶಾಲು ಹೆಸರಿನಲ್ಲಿ ಮಕ್ಕಳನ್ನು ಪ್ರಚೋದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದು ಖಂಡನೀಯ ಎಂದರು. ಬಿಜೆಪಿಗೆ ಅಧಿಕಾರ, ಹಣದ ವ್ಯಾಮೋಹ ಬಿಟ್ಟರೇ ಬೇರೆನೂ ಇಲ್ಲ. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಹುಡುಕಿದರೂ ಸಿಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಸಿ.ಯೋಗೇಶ್, ಎಚ್.ಪಿ.ಗಿರೀಶ್, ಶ್ರೀನಿವಾಸ್, ಚಂದ್ರಭೂಪಾಲ್, ಅನಿತಾ ಕುಮಾರ್, ಪಲ್ಲವಿ, ಇಮ್ತಿಯಾಜ್ ಇತರರಿದ್ದರು.
ALSO READ | About Shivamogga Live
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422