ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020
ಜನವಿರೋಧಿ, ಸಂವಿಧಾನ ವಿರೋಧಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ, ಎನ್.ಆರ್.ಸಿ ಮತ್ತು ಎನ್.ಪಿ.ಆರ್’ಗಳು ಜಾರಿಗೊಳಿಸಬಾರದು ಎಂದು ಆಗ್ರಹಿಸಿ, ಶಿವಮೊಗ್ಗದಲ್ಲಿ ಇವತ್ತು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಜಾಯಿಂಟ್ ಆಕ್ಷನ್ ಕಮಿಟಿ ಮತ್ತು ಸಂವಿಧಾನ ಉಳಿಸಿ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್’ಗಳ ವಿರುದ್ಧ ಈಗಾಗಲೇ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಗಿದೆ. ದೇಶದಲ್ಲಿ ಆರ್ಥಿಕತೆ ಕುಸಿತ ಕಂಡಿದೆ, ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ, ಅರಾಜಕತೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಕಾನೂನು ಜಾರಿಗೊಳಿಸುವ ಯೋಚನೆ ಮಾಡಲಾಗಿದೆ ಎಂದು ಸತ್ಯಾಗ್ರಹ ನಿರತರು ಆರೋಪಿಸಿದರು.
ಪ್ರಮುಖರಾದ ಇಕ್ಬಾಲ್ ಹಬೀಬ್ ಸೇಠ್, ಅಫ್ತಾಬ್ ಪರ್ವೀಜ್, ಚಾಂದ್ ಘನಿ ಸಾಬ್, ಮೌಲಾನ ಸಫೀವುಲ್ಲಾ, ಸೈಯ್ಯದ್ ಗಫೂರ್ ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





