ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 23 ಡಿಸೆಂಬರ್ 2019
ಮುಂದಿನ ಬಜೆಟ್ ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದ ಪಿಇಎಸ್ ಕಾಲೇಜು ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ಸುಭಿಕ್ಷ ಸಾವಯವ ಕೃಷಿಕರ ಬಹುರಾಜ್ಯ ಸಹಕಾರ ಸಂಘದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರತಿ ತಿಂಗಳು ಒಂದು ತಾಲೂಕಿನಲ್ಲಿ ರೈತರನ್ನು ಉತ್ತೇಜಿಸಲು ಬಜೆಟ್ ಬಳಿಕ ರೈತ ಸಮಾವೇಶ ನಡೆಸಲಾಗುತ್ತದೆ ಎಂದರು.
ಪ್ರಧಾನಮಂತ್ರಿ ಅವರ ಆಶಯದಂತೆ 2022 ಒಳಗಾಗಿ ರೈತರು ತಮ್ಮ ಕೃಷಿ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರಕಾರದ ಯೋಜನೆಗಳ ಸದುಪಯೋಗ ಪಡೆದು ಸುಧಾರಿತ ಕೃಷಿ ತಂತ್ರಜ್ಞಾನಗಳನ್ನು ಮತ್ತು ಕೃಷಿ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕು. ಪ್ರಸ್ತುತ 50ಸಾವಿರ ಸಾವಯವ ಕೃಷಿಕ ಕುಟುಂಬಗಳು ರಾಜ್ಯದಲ್ಲಿದ್ದು, ಇವರ ಸಂಖ್ಯೆ ಮುಂದಿನ ಒಂದು ವರ್ಷದಲ್ಲಿ 5ಲಕ್ಷ ತಲುಪಬೇಕು ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Savayava Samavesha in Shimoga. Chief Minister B S Yedyurappa, Deputy CM Lakshmana Savadhi and others participated in the programme
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422