ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (DCC BANK) ನಡೆದಿದೆ ಎನ್ನಲಾದ ಸಿಬ್ಬಂದಿ ನೇಮಕ ಅವ್ಯವಹಾರ ಮತ್ತು ಇತರೆ ಲೋಪಗಳ ತನಿಖೆಗೆ ರಾಜ್ಯ ಸಹಕಾರ ಇಲಾಖೆ ಆದೇಶಿಸಿದೆ.
ತನಿಖಾಧಿಕಾರಿಗಳ ನೇಮಕ
ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರು ನಗರ ಜಿಲ್ಲೆ 4ನೇ ವಲಯದ ಉಪ ನಿಬಂಧಕ ಪಿ.ಶಶಿಧರ್ ಮತ್ತು ದಾವಣಗೆರೆಯ ಲೆಕ್ಕಪರಿಶೋಧನಾ ಇಲಾಖೆಯ ಸಹಕಾರ ಸಂಘಗಳ ಜಂಟಿ ನಿರ್ದೇಶಕ ಮಹೇಶ್ವರಪ್ಪ ಅವರನ್ನು ತನಿಖಾಧಿಕಾರಿಗಳಾಗಿ ನೇಮಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್ ಸಿಗ್ನಲ್, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್
ಖುದ್ದು ಭೇಟಿ ನೀಡಿ ದಾಖಲೆ ಪರಿಶೀಲಿಸಿ
ಆರೋಪಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‌ಗೆ ಖುದ್ದು ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಬೇಕು. ದೂರು ಸಾಬೀತಾದಲ್ಲಿ ಅಗತ್ಯ ದಾಖಲೆಗಳೊಂದಿಗೆ 15 ದಿನದೊಳಗೆ ವರದಿ ಸಲ್ಲಿಸುವಂತೆ ಸಹಕಾರ ಸಂಘಗಳ ಜಂಟಿ ನಿರ್ದೇಶಕ ಅಶ್ವತ್ಥನಾರಾಯಣ ಆದೇಶದಲ್ಲಿ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸೆ.6ರಂದು ಮಾಂಸ ಮಾರಾಟ ನಿಷೇಧ
ಏನೆಲ್ಲ ಆರೋಪಗಳಿದ್ದವು?
ಬ್ಯಾಂಕ್‌ನ ಸಿಬ್ಬಂದಿ ನೇಮಕಕ್ಕೆ ಲಿಖಿತ ಪರೀಕ್ಷೆ ನಡೆಸಲು ಅನಧಿಕೃತ ವಿಶ್ವವಿದ್ಯಾಲಯಕ್ಕೆ ವಹಿಸಲಾಗಿದೆ. ಪರೀಕ್ಷೆ ಹಂತದಲ್ಲೂ ಹಲವು ನ್ಯೂನತೆಗಳನ್ನು ಎಸಗಲಾಗಿದೆ. ನೇಮಕ ಪ್ರಕ್ರಿಯೆಯ ವಿವರವನ್ನು ಆಡಳಿತ ಮಂಡಳಿಯಲ್ಲಿ ಚರ್ಚೆ ನಡೆಸಿಲ್ಲ. ಯಾವುದೇ ಮಾಹಿತಿ ನೀಡದೆ ನಿರ್ದೇಶಕರ ಮಂಡಳಿಯ ಅನುಮೋದನೆಯನ್ನೂ ಅಧಿಕೃತವಾಗಿ ಪಡೆಯದೆ ನೇಮಕ ಆದೇಶ ನೀಡಲಾಗಿದೆ. ಇದರಿಂದ ಅರ್ಹರಿಗೆ ಅನ್ಯಾಯವಾಗಿದೆ ಎಂಬ ದೂರುಗಳಿವೆ.