ಶಿವಮೊಗ್ಗ ಲೈವ್
ಶಿವಮೊಗ್ಗ: ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಶೀತ ವಾತಾವರಣ ಇದೆ. ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಜು.26ರಂದು ರಜೆ (Holiday) ಘೋಷಿಸಲಾಗಿದೆ. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ?

ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳುವಂತೆ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಆದೇಶಿಸಿದ್ದಾರೆ.