ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಆಗಸ್ಟ್ 2021
ಕರೋನ ಆತಂಕದ ನಡುವೆಯು ರಾಜ್ಯಾದ್ಯಂತ ಶಾಲಾ – ಕಾಲೇಜುಗಳ ತರಗತಿಗಳು ಪುನಾರಂಭವಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಲ್ಲಿ ಪಾಠ ಶುರುವಾಗಿದೆ. ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೋವಿಡ್ ನಿಯಮ ಕಡ್ಡಾಯ ಪಾಲನೆಗೆ ಕ್ರಮ ಕೈಗೊಳ್ಳಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿದ್ಯಾರ್ಥಿಗಳಿಗೆ ಆರತಿ ಬೆಳಗಿದ ಅಧಿಕಾರಿಗಳು
ಶಿವಮೊಗ್ಗದ ಕರ್ನಾಟಕ ಸಂಘ ಪಕ್ಕದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಶಾಲೆಗೆ ಸ್ವಾಗತಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಅವರು ಮಕ್ಕಳಿಗೆ ಆರತಿ ಬೆಳಗಿದರು.
ಥರ್ಮಲ್ ಸ್ಕ್ಯಾನಿಂಗ್, ಸಾಮಾಜಿಕ ಅಂತರ
ಕೋವಿಡ್ ತಡೆಗೆ ಪ್ರಕಟಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಸೂಚಿಸಿದೆ. ಅದರಂತೆ ಶಾಲೆ ಮತ್ತು ಕಾಲೇಜಿಗೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಯಿತು. ತರಗತಿಗಳಲ್ಲಿ ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಲಾಗಿತ್ತು. ಅದರಂತೆ ಪ್ರತಿ ಡೆಸ್ಕ್’ಗೆ ಇಬ್ಬರು ವಿದ್ಯಾರ್ಥಿಗಳನ್ನು ಕೂರಿಸಲಾಗಿತ್ತು.
ಮಿನಿಸ್ಟರ್ ಭೇಟಿ ಪರಿಶೀಲನೆ
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಯಾರೂ ಆತಂಕಪಡಬಾರದು ಎಂದು ತಿಳಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಮಕ್ಕಳು ಓದಿನಲ್ಲಿ ಹಿಂದುಳಿಯಬಾರದು ಎಂಬ ಕಾರಣಕ್ಕೆ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇವೆ. ಅನೇಕ ಮಂದಿ ಇದನ್ನು ಟೀಕಿಸಿದ್ದಾರೆ. ಆದರೆ ಮಕ್ಕಳು ಓದಿನಲ್ಲಿ ಹಿಂದುಳಿಯಬಾರದು ಎಂಬುದು ನಮ್ಮ ಉದ್ದೇಶ. ಮಕ್ಕಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಪೋಷಕರು ಕೂಡ ಭಯ ಬೀಳದೆ ಶಾಲೆ, ಕಾಲೇಜುಗಳಿಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.
ಸ್ಕೂಲು, ಕಾಲೇಜುಗಳಲ್ಲಿ ಉತ್ತಮ ಪ್ರತಿಕ್ರಿಯೆ
ಮೊದಲ ದಿನ ಶಾಲೆ, ಕಾಲೇಜುಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 465 ಪ್ರೌಢಶಾಲೆಗಳಿವೆ. ಇದರಲ್ಲಿ 9ನೇ ತರಗತಿಯ 25,405 ಮತ್ತು 10ನೇ ತರಗತಿಯ 24,600 ಸೇರಿ ಒಟ್ಟು 50,005 ವಿದ್ಯಾರ್ಥಿಗಳಿದ್ದಾರೆ.
ಜಿಲ್ಲೆಯಲ್ಲಿ 134 ಪಿಯುಸಿ ಕಾಲೇಜುಗಳಿವೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ 38 ಸಾವಿರ ವಿದ್ಯಾರ್ಥಿಗಳು ಜಿಲ್ಲೆಯಲ್ಲಿದ್ದಾರೆ. ನೂರಕ್ಕೂ ಅಧಿಕ ವಿದ್ಯಾರ್ಥಿಗಳು ತರಗತಿಯಲ್ಲಿರುವ ಕಡೆಗಳಲ್ಲಿ ಸೋಮವಾರದಿಂದ ಬುಧವಾರ ಮತ್ತು ಗುರುವಾರದಿಂದ ಶನಿವಾರದವರೆಗೆ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಶೇ.40ರಷ್ಟು ಶಿಕ್ಷಕರಿಗಷ್ಟೆ ಎರಡನೆ ಡೋಸ್
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಶಿಕ್ಷಕರು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಶೇ.40ರಷ್ಟು ಶಿಕ್ಷಕರು ಮಾತ್ರ ಈವರೆಗೂ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ದಿನ ಯಾವುದೆ ಗೊಂದಲದಲ್ಲಿ ಶಾಲೆ, ಕಾಲೇಜುಗಳು ಆರಂಭವಾಗಿದೆ. ವಿದ್ಯಾರ್ಥಿಗಳು ಕೂಡ ನಿರಾತಂಕವಾಗಿ ತರಗತಿಗಳಿಗೆ ಹಾಜರಾಗಿದ್ದು, ಉತ್ತಮ ಬೆಳವಣಿಗೆಯಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200