ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ನವೆಂಬರ್ 28ರಂದು ನೂರ್ ಅಫ್‌ಶಾ ಎಂಬ ಬಾಣಂತಿ ಸಾವಿಗೀಡಾಗಿದ್ದಾರೆ. ಆಕೆಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆಗ್ರಹಿಸಿದರು.
‘ಲಂಚ ಕೊಟ್ಟರಷ್ಟೆ ಮಗು ಕೊಡ್ತಾರೆʼ
ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಹೆಣ್ಣು ಮಗುವಿಗೆ ₹1,000 ಮತ್ತು ಗಂಡು ಮಗುವಿಗೆ ₹2,000 ಲಂಚ ಕೊಡಬೇಕು. ಆಗ ಮಾತ್ರ ಮಗುವನ್ನು ಪೋಷಕರಿಗೆ ಹಸ್ತಾಂತರಿಸುವ ಪದ್ಧತಿ ಇದೆ. ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದ್ರಿ ಇತ್ತೀಚೆಗೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಸಾರ್ವಜನಿಕರು ಈ ಸಂಬಂಧ ದೂರು ಸಲ್ಲಿಸಿದ್ದರು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆರೋಪಿಸಿದರು.

ಇದನ್ನೂ ಓದಿ » ಡಿಸೆಂಬರ್‌ನಲ್ಲಿ ಯಾವೆಲ್ಲ ಫೋನ್‌ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ? ಇಲ್ಲಿದೆ ಪಟ್ಟಿ
ಮೃತ ಬಾಣಂತಿ ನೂರ್ ಅಫ್‌ಶಾಳ ಕುಟುಂಬಕ್ಕೆ ಪರಿಹಾರ ನೀಡಬೇಕು. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಅಗತ್ಯ ಸಿಬ್ಬಂದಿ ನೇಮಿಸಬೇಕು. ಉತ್ತಮ ಆರೋಗ್ಯ ಸೇವೆ ಒದಗಿಸಬೇಕೆಂದು ಎಂದು ಎಸ್‌ಡಿಪಿಐ ಆಗ್ರಹಿಸಿದೆ.