ಇದ್ದ ಮನೆಗಳು ನೆಲಸಮ, ಟೆಂಟ್‍ನಲ್ಲಿ ಜನರ ವಾಸ, ಮನೆ ನಿರ್ಮಾಣ ವಿಳಂಬ, ಆಕ್ರೋಶ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021

ಮನೆಗಳ ನಿರ್ಮಾಣ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಶಿವಮೊಗ್ಗ ನಗರದಲ್ಲಿ ಪಿ.ಎಂ.ಎ.ವೈ. ಯೋಜನೆಯಡಿ ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದು ತುಂಬಾ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು.

ಗುತ್ತಿಗೆದಾರರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇಲ್ಲಿನ ಬಡ ಹಾಗೂ ಕಾರ್ಮಿಕರು ಮನೆ ಸಿಗುವುದೆಂಬ ಆಶಯದಿಂದ ಹಣ ಕೂಡ ಕಟ್ಟಿದ್ದಾರೆ. ಈಗ ಇರುವ ಮನೆಗಳನ್ನು ನೆಲಸಮ ಮಾಡಲಾಗಿದೆ. ಆದರೆ ಮನೆಗಳ ನಿರ್ಮಾಣ ಮಾತ್ರ ಆಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಫಲಾನುಭವಿಗಳು ನಿರ್ಗತಿಕರಾಗಿ ಟೆಂಟ್‌ಗಳಲ್ಲಿ ಅಲೆಮಾರಿಗಳಂತೆ ಜೀವನ ನಡೆಸುತ್ತಿದ್ದಾರೆ. ವಾರ್ಡ್ ನಂ.32ರ ಟಿಪ್ಪುನಗರ, 25ರ ಜೆ.ಪಿ.ನಗರ, ವಾರ್ಡ್ ನಂ. 3 ಹಾಗೂ 4ರ ರಾಗಿಗುಡ್ಡ ಸೇರಿದಂತೆ ಫಲಾನುಭವಿಗಳು ಬೀದಿಗೆ ಬಂದಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳುಕಾಮಗಾರಿ ಚುರುಕುಗೊಳಿಸಬೇಕು. ನಿರ್ಲಕ್ಷ್ಯ ವಹಿಸುತ್ತಿರುವ  ಗುತ್ತಿಗೆದಾರರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐನ ನಗರ ಅಧ್ಯಕ್ಷ ಇಂಮ್ರಾನ್ ಅಹಮ್ಮದ್, ಪ್ರಮುಖರಾದ ಇಫ್ರಾನ್‌ಖಾನ್, ಸೈಯದ್ ಜೀಷಾನ್, ಜಾವಿಧ್ ಬೇಗ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment