ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021
ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಎಸ್ಡಿಪಿಐ ಜಿಲ್ಲಾ ಶಾಖೆ ವತಿಯಿಂದ ಮಹಾವೀರ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾರು, ಆಟೋ, ಬೈಕ್, ಸೈಕಲ್ ತಳ್ಳಿಕೊಂಡು ಹೋಗಿ ಪ್ರತಿಭಟನೆ ನಡೆಸಲಾಯಿತು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದೆ. ಪೆಟ್ರೋಲಿಯಂ ಉತ್ಪನ್ನಗಳ ಬಳಕೆದಾರರಿಗೆ ಇದರ ಲಾಭ ವರ್ಗಾಯಿಸುವ ಬದಲು, ಕೇಂದ್ರ ಸರ್ಕಾರ ಶ್ರೀಮಂತರ ಬೊಕ್ಕಸ ತುಂಬಿಸುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತೈಲೋತ್ಪನ್ನಗಳ ಬೆಲೆ ಇಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಎಸ್ಡಿಪಿಐ ಸಂಘಟನೆ ಜಿಲ್ಲಾಧ್ಯಕ್ಷ ಸಲೀಂ ಖಾನ್, ಅಲ್ಲಾಭಕ್ಷ್, ಕಲೀಂವುಲ್ಲಾ, ಮುಜೀಬ್, ಇಮ್ರಾನ್, ಆಸೀಫ್, ಸಾದಿಕ್, ಫೈರೋಜ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






